
ಬಂಟ್ವಾಳ: ಅಚಲ ಕಾಯಕ ನಿಷ್ಠರಾಗಿದ್ದ ಮಡಿವಾಳ ಮಾಚಿದೇವ ಅವರು ವಚನ ಸಾಹಿತ್ಯ ಮತ್ತು ಧರ್ಮದ ಸಂರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅವರ ವಚನಗಳ ಸಂದೇಶದಂತೆ ಇಂದು ಮನಗಳಲ್ಲಿರುವ ಕೊಳೆಯನ್ನು ತೊಳೆಯುವ ಅನಿವಾರ್ಯತೆ ಇದೆ ಎಂದು ತಹಸೀಲ್ದಾರ್ ಡಿ. ಅರ್ಚನಾ ಭಟ್ ಹೇಳಿದರು.

ಅವರು ಶನಿವಾರ ಬಿ.ಸಿ.ರೋಡಿನ ಆಡಳಿತ ಸೌಧದ ಸಭಾಂಗಣದಲ್ಲಿ
ಬಂಟ್ವಾಳ ತಾಲೂಕು ಮಟ್ಟದ ಮಡಿವಾಳ ಮಾಚಿದೇವ ಜಯಂತಿ ಆಚರಣೆ ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕೇಂದ್ರ ಸ್ಥಾನೀಯ ಉಪತಹಶೀಲ್ದಾರ್ ನರೇಂದ್ರನಾಥ ಮಿತ್ತೂರು, ತಾಲೂಕು ಕಛೇರಿ ಸಿಬ್ಬಂದಿ, ಗ್ರಾಮ ಆಡಳಿತ ಅಧಿಕಾರಿಯವರು, ಗ್ರಾಮ ಸಹಾಯಕರು ಹಾಜರಿದ್ದರು.
—
Advertisement







