
ಬಂಟ್ವಾಳ: ಸಹಕಾರಿ ರಂಗದಲ್ಲಿ ವಿಶಿಷ್ಠ ಛಾಪನ್ನು ಮೂಡಿಸಿರುವ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ತನ್ನ 16ನೇ ವಾಮಂಜೂರು ಶಾಖೆಯ ಉದ್ಘಾಟನಾ ಸಮಾರಂಭದ ಸಂಭ್ರಮದಲ್ಲಿದೆ.
ವಾಮಂಜೂರಿನ ಬಾವಾ ಬಿಲ್ಡರ್ ಸ್ಮಾರ್ಟ್ ಸಿಟಿ ಕಟ್ಟಡದಲ್ಲಿ ಎ.30ರಂದು ಬುಧವಾರ ಬೆಳಿಗ್ಗೆ 10.30ಕ್ಕೆ ವಾಮಂಜೂರು ಶಾಖೆ ಉದ್ಘಾಟನೆಗೊಳ್ಳಲಿದೆ.
೧೬ನೇ ವಾಮಂಜೂರು ಶಾಖೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಲಿರುವರು. ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸುವರು. ಭದ್ರತಾ ಕೋಶವನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈಭರತ್ ಶೆಟ್ಟಿ ಉದ್ಘಾಟಿಸುವರು.

ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲೆ ಸಹಕಾರ ಸಂಘಗಳ ಉಪನಿಬಂಧಕ ರಮೇಶ್ ಎಚ್.ಎನ್., ವಾಮಂಜೂರು ಸೈಂಟ್ ಜೋಸೆಫ್ ದಿ ವರ್ಕರ್ ಚರ್ಚ್ನ ಧರ್ಮಗುರುಗಳಾದ ವಂ. ಫಾ. ಜೇಮ್ಸ್ ಡಿಸೋಜಾ, ವಾಮಂಜೂರು, ಇಸ್ಲಾಹುಲ್ ಇಸ್ಲಾಂ ಮದರಸ ಮತ್ತು ಜುಮ್ಮಾ ಮಸ್ಜಿದ್ ಖತೀಬರಾದ ಅಬ್ದುಲ್ ರಹಿಮಾನ್ ಕೋಯ, ಗುರುಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಓಂ ಪ್ರಕಾಶ್ ಶೆಟ್ಟಿ, ಮಾಜಿ ಕಾರ್ಪೋರೇಟರ್ಗಳಾದ ಜಯಪ್ರಕಾಶ್, ಹೇಮಲತಾ ರಘು ಸಾಲ್ಯಾನ್, ರಾಜ್ಕುಮಾರ್ ಶೆಟ್ಟಿ ತಿರುವೈಲುಗುತ್ತು, ಗೆಜ್ಜೆಗಿರಿ ಕ್ಷೇತ್ರದ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿಮೂಡುಶೆಡ್ಡೆ ಗ್ರಾ.ಪಂ. ಅಧ್ಯಕ್ಷ ಅನಿಲ್ ಮತ್ತಿತರು ಗಣ್ಯರು ಭಾಗವಹಿಸುವರು.
ಮೂರ್ತೆದಾರಿಕೆ ಮಾಡುವ ಕುಲ ಕಸುಬುದಾರರ ಶ್ರೇಯೋಭಿವೃದ್ಧಿ ಹಾಗೂ ಅವರ ಆರ್ಥಿಕ ಜೀವನ ಮಟ್ಟ ಸುಧಾರಿಸುವ ಸದುದ್ದೇಶದೊಂದಿಗೆ 1991ರಲ್ಲಿ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಸುಭಾಷ್ನಗರದ ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ ಪ್ರಾರಂಭಗೊಂಡ ಬ್ಯಾಂಕ್, ೨೦೦೫ ನವೆಂಬರ್ ೧೮ ರಂದು ಬೊಳ್ಳಾಯಿಯಲ್ಲಿ ಬ್ಯಾಂಕಿಂಗ್ ವ್ಯವಹಾರವನ್ನು ಆರಂಭಿಸಿತು. ಬಂಟ್ವಾಳ ತಾಲೂಕಿನ ಎಲ್ಲಾ ಭಾಗಗಳಲ್ಲಿರುವ ಮೂರ್ತೆದಾರರಿಗೆ ಅನುಕೂಲವಾಗಬೇಕು ಎನ್ನುವ ಉದ್ದೇಶದಿಂದ ಹಂತ ಹಂತವಾಗಿ ಬೋಳಂತೂರು, ಚೇಳೂರು, ಫಜೀರು, ವಾಮದಪದವು, ಸಿದ್ದಕಟ್ಟೆ, ಅಣ್ಣಳಿಕೆ, ಮಾರ್ನಬೈಲು, ಮಣಿಹಳ್ಳ, ಕಾವಳ ಮೂಡೂರು ಎನ್.ಸಿ. ರೋಡು, ಸಾಲೆತ್ತೂರು, ಕಂಬಳಬೆಟ್ಟು, ಪುಣಚ, ಬಿ.ಸಿ.ರೋಡು, ವೇಣೂರು ಶಾಖೆಗಳನ್ನು ತೆರೆದು ಬ್ಯಾಂಕಿಂಗ್ ಸೇವೆಗಳನ್ನು ನೀಡುತ್ತಿದೆ. ಗ್ರಾಹಕರಿಗೆ ಕಡಿಮೆ ಬಡ್ಡಿದರದಲ್ಲಿ ಆಭರಣ ಸಾಲ, ಅಡಮಾನ ಸಾಲ, ವಾಹನ ಸಾಲ, ಮೂರ್ತೆದಾರಿಕೆ ಸಾಲ, ವ್ಯಾಪಾರ ಸಾಲ, ವೈಯಕ್ತಿಕ ಸಾಲ, ಠೇವಣಾತಿ ಸಾಲ, ಸ್ವಸಹಾಯ ಸಾಲ, ಮಹಿಳೆಯರಿಗೆ ತ್ವರಿತ ಸಾಲ, ಪಿಗ್ಮಿ ಮುಂಗಡ ಸಾಲವನ್ನು ನೀಡಲಾಗುತ್ತಿದೆ. ಹಿರಿಯ ನಾಗರಿಕರಿಗೆ ಮತ್ತು ಸಂಘ ಸಂಸ್ಥೆಗಳ ಠೇವಣಿಗೆ ೦.೫% ಹೆಚ್ಚುವರಿ ಬಡ್ಡಿ ನೀಡಲಾಗುತ್ತಿದೆ, ಸಿದ್ದಕಟ್ಟೆ ,ಪಣಚ, ಬಿ.ಸಿ. ರೋಡು ಹಾಗೂ ವೇಣೂರು ಶಾಖೆಯಲ್ಲಿ ಇ- ಸ್ಟ್ಯಾಂಪಿಂಗ್ ಸೌಲಭ್ಯವನ್ನು ಗ್ರಾಹಕರಿಗೆ ನೀಡುತ್ತಿದೆ.

ಪ್ರಸ್ತುತ ಎ ತರಗತಿ ಸದಸ್ಯರು ೧,೯೧೭ ಇತರ ಸದಸ್ಯರು ೧೪,೬೩೨ ಒಟ್ಟು ೧೬,೫೪೮ ಸದಸ್ಯರನ್ನು ಹೊಂದಿ ೪೮,೯೨,೯೩,೮೩೩ ರೂಪಾಯಿ ಠೇವಣಾತಿ ಇದೆ.. ಷೇರು ಮೊತ್ತ ೬೪,೧೯,೪೭೫ರೂಪಾಯಿ, ೪೨,೧೨,೫೮,೧೩೮ ರೂಪಾಯಿ ಸಾಲ ನೀಡಿದ್ದು. 25 ಲಕ್ಷ ರೂಪಾಯಿ ಲಾಭ ಗಳಿಸಿದೆ.
ಮುಂದಿನ ದಿನಗಳಲ್ಲಿ ಇನ್ನಷ್ಟು ಹೊಸ ಶಾಖೆಗಳನ್ನು ಕಾರ್ಯವ್ಯಾಪ್ತಿಯಲ್ಲಿ ತೆರೆಯುವ ಯೋಜನೆಯನ್ನು ಸಂಘ ಹೊಂದಿದೆ. ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಿಂದ ಮೊದಲ್ಗೊಂಡು ಎಲ್ಲಾ ಸಿಬ್ಬಂದಿಗಳು ಮಹಿಳೆಯರೇ ಆಗಿದ್ದು ಮಹಿಳೆಯರ ಉದ್ಯೋಗ ಹಾಗೂ ಸ್ವಾವಲಂಬಿ ಬದುಕಿಗೆ ನಮ್ಮ ಸಂಘ ಅವಕಾಶ ನೀಡಿದೆ. ಹಾಗೂ ಇನ್ನಷ್ಟು ಶಾಖೆಗಳನ್ನು ಆರಂಭಿಸಿ ಹೆಚ್ಚಿನ ಮಹಿಳೆಯರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ.
ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ, ಉಪಾಧ್ಯಕ್ಷರಾಗಿ ವಿಠಲ ಬೆಳ್ಚಾಡ ಚೇಳೂರು, ನಿರ್ದೇಶಕರಾಗಿ ಸುಂದರ ಪೂಜಾರಿ ಬೀಡಿನಪಾಲು, ರಮೇಶ್ ಅನ್ನಪ್ಪಾಡಿ, ಪೂಜಾರಿ ಗಿರೀಶ್ ಕುಮಾರ್ ಪೆರ್ವ, ಜಯಶಂಕರ್ ಕಾನ್ಸಾಲೆ, ಶ್ರೀಮತಿ ಕೆ. ಸುಜಾತ ಎಂ., ಶ್ರೀಮತಿ ವಾಣಿವಸಂತ, ಅರುಣ್ ಕುಮಾರ್ ಎಂ. ಆಶಿಶ್ ಪೂಜಾರಿ, ಚಿದಾನಂದ ಎಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಮಮತಾ ಜಿ. ಸಂಘವನ್ನು ಮುನ್ನಡೆಸುತ್ತಿದ್ದಾರೆ.
Advertisement







