
ಬಂಟ್ವಾಳ: ಪುದು ಗ್ರಾಮದ ಸುಜೀರು ದೈಯಡ್ಕ ಬಳಿಯ ಶ್ರೀ ರಕ್ತೇಶ್ವರಿ ಸಪರಿವಾರ ದೈವಗಳ ಸಾನಿಧ್ಯದಲ್ಲಿ ರಕ್ತೇಶ್ವರಿ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವವು ಮೇ 8ಮತ್ತು 9 ರಂದು ನಡೆಯಲಿದೆ. ಮೇ 8 ರಂದು ಗೋಪೂಜೆ, ವಾಸ್ತು ಪೂಜೆ, ರಕ್ಷೆಘ್ನ ಹೋಮ, ದೈವಗಳ ಬಿಂಬ ಶುದ್ಧಿ ನಡೆಯಲಿದೆ. ಮೇ 9ರಂದು ಶ್ರೀ ಅಶ್ವತ್ಥನಾರಾಯಣ ಹಾಗೂ ರಕ್ತೇಶ್ವರಿ ಸಪರಿಹಾರ ದೈವಗಳ ಪ್ರತಿಷ್ಠೆ – ಕಲಶಾಭಿಷೇಕ ನಡೆಯಲಿದೆ.

ಮಧ್ಯಾಹ್ನ 11 ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಸುಜೀರುಗುತ್ತು ಯಜಮಾನರಾದ ರಾಮಕೃಷ್ಣ ಚೌಟ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪ್ರಕಾಶ್ಚಂದ್ರ ರೈ ದೇವಸ್ಯ, ಜ್ಯೋತಿಷಿ ಅನಿಲ್ ಪಂಡಿತ್, ಉದ್ಯಮಿ ಅಜಿತ್ ಚೌಟ ದೇವಸ್ಯ, ಉದ್ಯಮಿ ಸಂಜೀವ ಪೂಜಾರಿ ಬಿ.ಸಿ.ರೋಡು, ಹಿಂದು ಮುಖಂಡ ಸತ್ಯಜಿತ್ ಸುರತ್ಕಲ್, ಉದ್ಯಮಿ ಉಮೇಶ್ ಸಾಲಿಯಾನ್, ಪುದು ಗ್ರಾಮ ಪಂಚಾಯತ್ ಸದಸ್ಯ ವಿಷು ಕುಮಾರ್ ಭಾಗವಹಿಸಲಿದ್ದಾರೆ.
ರಾತ್ರಿ ರಕ್ತೇಶ್ವರಿ ದೈವದ ನೇಮ ಮತ್ತು ಕೊರತಿ ಗುಳಿಗ ದೈವದ ಗಗ್ಗರ ಸೇವೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
Advertisement







