
ಬಂಟ್ವಾಳ: ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನಾಪತ್ತೆಯಾಗಿದ್ದು ಅವರ ಬೈಕ್ ಪಾಣೆಮಂಗಳೂರಿನ ನೇತ್ರಾವತಿ ಸೇತುವೆ ಬಳಿ, ಬಟ್ಟೆ, ಪರ್ಸ್ ಮತ್ತಿತರ ವಸ್ತಗಳು ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿದ್ದು ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಬಂಟ್ವಾಳ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಭೇಟಿ ನೀಡಿ ನದಿಯಲ್ಲಿರುವ ನೀರಿನ ಟ್ಯಾಂಕ್ ನಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ.



ಸ್ಥಳೀಯ ಈಜುಗಾರರು ನದಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಸ್ಥಳಕ್ಕೆ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮತ್ತಿತರ ಪ್ರಮುಖರು ಸ್ಥಳದಲ್ಲಿ ಹಾಜರಿದ್ದಾರೆ.
Advertisement







