
ಬಂಟ್ವಾಳ: ಬಿ.ಸಿ.ರೋಡು- ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಬದಿ ಲಯನ್ಸ್ ಕ್ಲಬ್ ಜಿಲ್ಲಾ ಯೋಜನೆಯಾಗಿ ಸಾಲುಮರಗಳನ್ನು ನೆಟ್ಟಿದ್ದು ಬಂಟ್ವಾಳ ಲಯನ್ಸ್ ಕ್ಲಬ್ ಕಳೆದ 4 ವರ್ಷಗಳಿಂದ ನಿರ್ವಹಣೆಯನ್ನು ನಡೆಸಿಕೊಂಡು ಬರುತ್ತಿದೆ.


ಲಯನ್ಸ್ ಕ್ಲಬ್ ನ ಜಿಲ್ಲಾ ಗವರ್ನರ್ ಆಗಿದ್ದ ವಸಂತ್ ಕುಮಾರ್ ಶೆಟ್ಟಿಯವರ ಅವಧಿಯಲ್ಲಿ ಜಿಲ್ಲಾ ಯೋಜನೆಯಾಗಿ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಬಿ.ಸಿ.ರೋಡು- ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲದಲ್ಲಿ ಗಿಡಗಳನ್ನು ನೆಟ್ಟು ಬೆಳೆಸಲಾಗಿತ್ತು. ಇದರ ನಿರ್ವಹಣೆಯ ಜವಾಬ್ದಾರಿಯನ್ನು ಬಂಟ್ವಾಳ ಲಯನ್ಸ್ ಕ್ಲಬ್ ನಡೆಸಿಕೊಂಡು ಬರುತ್ತಿದ್ದು ಬೇಸಿಗೆಯಲ್ಲಿ ಗಿಡಗಳಿಗೆ ನೀರುಣಿಸಿ, ಮಳೆಗಾಲದಲ್ಲಿ ಅಗಲವಾಗಿ ವಿಸ್ತರಿಸಿಕೊಂಡ ಗೆಲ್ಲುಗಳನ್ನು ತೆರವುಗೊಳಿಸಿ ನಿರ್ವಹಣೆ ಮಾಡುತ್ತಿದೆ.


ಈ ವರ್ಷವೂ ಕ್ಲಬ್ ಅಧ್ಯಕ್ಷ ರೋಹಿತಾಶ್ವ ಬಂಗ ಅವರ ನೇತೃತ್ವದಲ್ಲಿ ಮರಗಳ ನಿರ್ವಹಣೆ ಕಾರ್ಯ ನಡೆಸಲಾಯಿತು. ಈ ಸಂದರ್ಭ ಮಾಜಿ ಗವರ್ನರ್ ವಸಂತ ಕುಮಾರ್ ಶೆಟ್ಟಿ, ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ರೋಹಿತಾಶ್ವ ಬಂಗ, ಕೋಶಾಧಿಕಾರಿ ರಾಮಕೃಷ್ಣ ರಾವ್, ಮಾಜಿ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿ, ಪ್ರಶಾಂತ್ ಕೋಟ್ಯಾನ್, ಸದಸ್ಯರಾದ ಸತ್ಯನಾರಾಯಣ ರಾವ್, ಗಣೇಶ್ ಪ್ರಸಾದ್ ಉಪಸ್ಥಿತರಿದ್ದರು.
Advertisement







