
ಉಡುಪಿ : ಶಿವಮೊಗ್ಗದಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಓಪನ್ ಚಾಂಪಿಯನ್ ಶಿಪ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದು ತನಿಷ್ಕ ಪವನ್ ಕುಮಾರ್ ಸಾಧನೆ ಮಾಡಿದ್ದಾಳೆ.


ಉಡುಪಿ ಅಜ್ಜರಕಾಡು ಸೈಂಟ್ ಸಿಸಿಲಿಯ ಪ್ರೌಢಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆ ಭಾರತೀಯ ರೈಲ್ವೆ ಇಲಾಖೆಯ ಪೊಲೀಸ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬಂಟ್ವಾಳ ತಾಲೂಕಿನ ಕೂರಿಯಾಳದ ಪವನ್ ಕುಮಾರ್ ಮತ್ತು ಅಕ್ಷತಾ ಪವನ್ ಕುಮಾರ್ ದಂಪತಿಯ ಸುಪುತ್ರಿ ಹಾಗೂ ಜಗದೀಶ್ ಭಂಡಾರಿ ಕುರಿಯಾಳ ಮತ್ತು ಮೋಹಿನಿ ಜಗದೀಶ್ ಭಂಡಾರಿ ಅವರ ಮೊಮ್ಮಗಳು. ಇನ್ಸ್ಟಿಟ್ಯೂಟ್ ಆಫ್ ಬುಡಕಾನ್ ಕರಾಟೆ ಮಾರ್ಷಲ್ ಆರ್ಟ್ ನ ತರಬೇತುದಾರ ಸಂತೋಷ್ ಕುಮಾರ್ ಶೆಟ್ಟಿ ಅವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.

Advertisement







