
ಬಂಟ್ವಾಳ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ 2024-2025ನೇ ಸಾಲಿನ ಸಾಧನಾ ಶ್ರೇಷ್ಠ ಪ್ರಶಸ್ತಿಯನ್ನು ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ ಎನ್ ರಾಜೇಂದ್ರ ಕುಮಾರ್ ನೀಡಿ ಗೌರವಿಸಿದರು.
ಸಂಘದ ಅಧ್ಯಕ್ಷ ಕೆ.ಸಂಜೀವ ಪೂಜಾರಿ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮಮತಾ ಜಿ. ಸ್ವೀಕರಿಸಿದರು. ನಿರ್ದೇಶಕರಾದ ಅರುಣ್ ಕುಮಾರ್ ಎಂ. ಆಶೀಶ್ ಪೂಜಾರಿ, ಕೆ.ಸುಜಾತಾ ಎಂ. ಹಾಗೂ ಎಜಿಎಂ ಶಿಲ್ಪಾ ಬಿ. ಹಾಗೂ ಶಾಖಾ ವ್ಯವಸ್ಥಾಪಕಿ ಅಶ್ವಿನಿ ಕಿರಣ್ ಹಾಗೂ ಮನೀಶಾ ಹಾಗೂ ಮಹಾಮಂಡಲದ ಸಿ ಇ ಒ ಕಿಶೋರ್ ಉಪಸ್ಥಿತರಿದ್ದರು. ಸಹಕಾರ ಸಂಘಗಳ ಉಪನಿಬಂಧಕ ಹೆಚ್ ಎನ್ ರಮೇಶ್,ಡಿ ಸಿ ಸಿ ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ, ಭಾಸ್ಕರ್ ಎಸ್ ಕೋಟ್ಯಾನ್, ಸದಾಶಿವ ಉಳ್ಳಾಲ,ಎಸ್ ಎನ್ ಮನ್ಮಥ,ಅಶೋಕ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು
Advertisement







