
ಬಂಟ್ವಾಳ: ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳವು 2024-25 ನೇ ಸಾಲಿನಲ್ಲಿ ಸಾಧಿಸಿದ ಸರ್ವತೋಮುಖ ಅಭಿವೃಧಿಗಾಗಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಮಹಾಸಭೆಯಲ್ಲಿ ಸಾಧಾನ ಪುರಸ್ಕಾರ ಪ್ರಶಸ್ತಿ ಸ್ವೀಕರಿತು.
ಸಮಾಜ ಸೇವಾ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ದಾಖಲೆಯ 1158.43 ಕೋಟಿ ವ್ಯವಹಾರ ನಡೆಸಿ 5.04 ಕೋಟಿ ಲಾಭ ಗಳಿಸಿರುತ್ತದೆ. ಸಂಘದ ದುಡಿಯುವ ಬಂಡವಾಳವು 259.66 ಕೋಟಿ ಆಗಿರುತ್ತದೆ ಮತ್ತು ಆಡಿಟ್ ವರ್ಗಿಕರಣದಲ್ಲಿ ಸತತ ‘ಎ’ ಶ್ರೇಣಿಯನ್ನು ಪಡೆದಿರುತ್ತದೆ. ಸಂಘವು ಸಾಧಿಸಿದ ಈ ಎಲ್ಲಾ ಸಾಧನೆಯನ್ನು ಗುರುತಿಸಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರು ಸತತ ನಾಲ್ಕನೇ ಬಾರಿ ಸಾಧಾನ ಪುರಸ್ಕಾರ ನೀಡಿ ಗೌರವಿಸಿದರು. ಸಂಘದ ಅಧ್ಯಕ್ಷ ಸುರೇಶ್ ಕುಲಾಲ್, ಪ್ರಧಾನ ವ್ಯವಸ್ಥಾಪಕ ಭೋಜ ಮೂಲ್ಯ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ. ಎಮ್.ಎನ್. ರಾಜೇಂದ್ರ ಕುಮಾರ್ ಅವರಿಂದ ಪ್ರಶಸ್ತಿ ಸ್ವಿಕರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಜನಾರ್ದನ ಬೊಂಡಾಲ, ನಿರ್ದೇಶಕರಾದ ರಮೇಶ್ ಬಿ. ಸಾಲ್ಯಾನ್, ಸುರೇಶ್ ಕುಲಾಲ್ ಎನ್., ಕಿರಣ್ ಕುಮಾರ್ ಎ., ಅರುಣ್ ಕುಮಾರ್ ಕೆ. ಮತ್ತು ಸಿಬ್ಬಂದಿ ವಸಂತ ಎಂ., ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಎಚ್.ಎನ್. ರಮೇಶ್, ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ನಿರ್ದೇಶಕರಾದ ರಾಜರಾಮ್ ಭಟ್, ಶಶಿಕುಮಾರ್ ರೈ ಬಾಲ್ಯೊಟ್ಟು, ಭಾಸ್ಕರ ಕೋಟ್ಯಾನ್, ಕೆ. ಜೈರಾಜ್ ಬಿ. ರೈ ಮೊದಲಾದವರು ಉಪಸ್ಥಿತರಿದ್ದರು.
Advertisement







