
ಬಂಟ್ವಾಳ: ಜೆಸಿಐ ಬಂಟ್ವಾಳದ ಜೆಸಿ ಸ್ಪಾಹದ ಸಮಾರೋಪ ಸಮಾರಂಭ ಭಾನುವಾರ ಸಂಜೆ ಬಿ.ಸಿ.ರೋಡಿನ ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಂಟ್ವಾಳ ತಾಲೂಕು ಶಾಮಿಯಾನ ಮಾಲಕರ ಸಂಘದ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಮೆಲ್ಕಾರ್ ಮಾತನಾಡಿ ಯುವಕರಿಗೆ ತರಬೇತಿ ನೀಡುವ ಸಂಸ್ಥೆಯಾಗಿರುವ ಜೆಸಿಐ ಬಂಟ್ವಾಳ ಸೇವಾ ಕಾರ್ಯಗಳಲ್ಲೂ ತೊಡಗಿಸಿಕೊಂಡಿರುವುದು ಅಭಿನಂದನೀಯ. ಸಮಾಜದಲ್ಲಿ ಎಲೆಮರೆಯ ಕಾಯಿಯಂತೆ ಸೇವೆ ಮಾಡುವ ಯುವಕರನ್ನು ಗುರುತಿಸಿ ಗೌರವಿಸಿರುವುದು ಶ್ಲಾಘನೀಯ ಎಂದರು.


ಜೆಸಿಐ ಬಂಟ್ವಾಳದ ಅಧ್ಯಕ್ಷ ಗಣೇಶ್ ಕೆ. ಕುಲಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಜೇಸಿ ಸಪ್ತಾಹದಲ್ಲಿ ಹಮ್ಮಿಕೊಂಡ ಕಾರ್ಯಕ್ರಮಗಳ ವಿವರ ನೀಡಿದರು. ವಿವಿಧ ಕ್ಷೇತ್ರಗಳ ಸಮಾಜ ಸೇವಕರಾದ ವಸಂತ ಮುದಿಮಾರು, ಚಿನ್ನಕಲ್ಲಡ್ಕ, ದೇವದಾಸ್ ನೀರೊಲ್ಬೆ, ಮಹೇಶ್ ಕುಲಾಲ್ ಕಡೇಶಿವಾಲಯ ಅವರಿಗೆ ಗೌರವ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ನಿಕಟಪೂರ್ವಾಧ್ಯಕ್ಷೆ ರಶ್ಮಿ ಶೆಟ್ಟಿ, ಕಾರ್ಯದರ್ಶಿ ಕಿಶೋರ್ ಕುಮಾರ್ ಆಚಾರ್ಯ, ಕಾರ್ಯಕ್ರಮ ನಿರ್ದೇಶಕ ಸದಾನಂದ ಡಿ. ಬಂಗೇರ, ಲೇಡಿ ಜೆಸಿ ಅಧ್ಯಕ್ಷೆ ಬಬಿತಾ ಗಣೇಶ್ ಉಪಸ್ಥಿತರಿದ್ದರು.


Advertisement







