
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಅ.12 ರಂದು ಭಾನುವಾರ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಮೂಡುನಡುಗೋಡು ಗ್ರಾಮದ ದಡ್ಡಲಕಾಡು ಸರಕಾರಿ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆಯಲಿದೆ.
ಅಲ್ಕಾರ್ಗೋ ಲಾಜಿಸ್ಟಿಕ್ ಮಂಗಳೂರು, ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ ಮಂಗಳೂರು, ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್, ದಡ್ಡಲಕಾಡು, ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಶನ್ (ರಿ.) ಬಂಟ್ವಾಳ ಕ್ಷೇತ್ರ ಸಮಿತಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ.) ಬಂಟ್ವಾಳ ವಲಯ ಹಾಗೂ ಸರಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆ, ದಡ್ಡಲಕಾಡು, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ ಯೇನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ ದೇರಳಕಟ್ಟೆ ಶಿಬಿರಕ್ಕೆ ಸಹಯೋಗ ನೀಡಲಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ವಚನ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Advertisement







