
ಬಂಟ್ವಾಳ: ದ.ಕ. ಜಿಲ್ಲಾ ಆಟೋ ರಿಕ್ಷಾ ಚಾಲಕರ ಮತ್ತು ಮಾಲಕರ ಸಂಘಗಳ ಒಕ್ಕೂಟ ಇದರ ಬಂಟ್ವಾಳ ತಾಲೂಕು ಘಟಕದ ಪ್ರಥಮ ಮಹಾಸಭೆಯು ನ.18ರಂದು ಮಂಗಳವಾರ ಬೆಳಿಗ್ಗೆ 9.30ಕ್ಕೆ ಬಿ.ಸಿ.ರೋಡಿನ ಲಯನ್ಸ್ ಸೇವಾಮಂದಿರದಲ್ಲಿ ನಡೆಯಲಿದೆ.
ಮಂಗಳೂರು ಘಟಕದ ಅಧ್ಯಕ್ಷ ಭರತ್ ಕುಮಾರ್ ಮಂಗಳೂರು ಅಧ್ಯಕ್ಷತೆ ವಹಿಸುವರು, ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಉದ್ಘಾಟಿಸುವರು, ಮುಖ್ಯ ಅತಿಥಿಗಳಾಗಿ ಹೆಚ್ಚವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮರಡ್ಡಿ, ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಚರಣ್ ಕೆ. ವಕೀಲ ಕೆ. ರಮೇಶ್ ಉಪಾಧ್ಯಾಯ, ಉದ್ಯಮಿ ಸುನೀಲ್ ಬಿ., ಮಂಗಳೂರು ಘಟಕದ ಗೌರವಾಧ್ಯಕ್ಷ ಅಶೋಕ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಲೋಕೇಶ್ ಶೆಟ್ಟಿ, ಬಂಟ್ವಾಳ ತಾಲೂಕು ರಿಕ್ಷಾ ಚಾಲಕ ಮಾಲಕ ಸಂಘದ ಮಾಜಿ ಅಧ್ಯಕ್ಷ ವಿಶ್ವನಾಥ ಚೆಂಡ್ತಿಮಾರ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ


Advertisement







