
ಬಂಟ್ವಾಳ: ಬಿ.ಸಿ. ರೋಡ್ ಬಳಿ ನಾರಾಯಣಗುರು ವೃತ್ತಕ್ಕೆ ಇನೋವಾ ಕಾರುಡಿಕ್ಕಿಯಾಗಿ ಮೂವರ ದಾರುಣವಾಗಿ ಸಾವಿಗೀಡಾಗಿದ್ದಾರೆ.
ನಿನ್ನೆ ಬೆಳಗಿನ ಜಾವ ಘಟನೆ ನಡೆದಿದ್ದು
ಬೆಂಗಳೂರಿನಿಂದ ಉಡುಪಿಯ ಕಡೆಗೆ ತೆರಳುವಾಗ ಈ ದುರ್ಘಟನೆ ನಡೆದಿದೆ.


ಬೆಂಗಳೂರು ನಿವಾಸಿಗಳಾದ ರವಿ (64), ನಂಜಮ್ಮ (75), ರಮ್ಯಾ(23) ಎಂಬವರುಗಳು ಮೃತಪಟ್ಟವರು. ಗಾಯಾಳುಗಳಾದ ಸುಶೀಲ, ಕೀರ್ತಿ ಕುಮಾರ್, ಕಿರಣ್, ಬಿಂದು, ಪ್ರಶಾಂತ್ ಹಾಗೂ ಚಾಲಕ ಸುಬ್ರಹ್ಮಣ್ಯ ಸೇರಿದಂತೆ ಉಳಿದ 6 ಜನರು ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Advertisement







