
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೊಜನೆಯ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಸೌಭಾಗ್ಯ ಮತ್ತು ಶ್ರೀದುರ್ಗಾ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಬೆಂಜನಪದವು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು.


ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ಯೋಜನಾಧಿಕಾರಿ ಜಯಾನಂದ ಕಾರ್ಯಕ್ರಮವನ್ನು ಉದ್ಘಾಟಿಸಿ ಜ್ಞಾನವಿಕಾಸದ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಮಹಿಳಾ ಸಾಂತ್ವನ ಕೇಂದ್ರದ ಸಮಾಲೋಚಕಿ ದ್ರಾಕ್ಷಿಯಿನಿ, ಒಕ್ಕೂಟ ನಿಕಟಪೂರ್ವ ಅಧ್ಯಕ್ಷ ಉಮೇಶ್, ಜಯಂತ್, ವಲಯ ಅಧ್ಯಕ್ಷ ಜನಾರ್ಧನ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಾಮನ ಆಚಾರಿ, ಬ್ರಹ್ಮರಕೂಟ್ಲು ಒಕ್ಕೂಟದ ಅಧ್ಯಕ್ಷೆ ಗೀತಾ, ಮೇಲ್ವಿಚಾರಕರಾದ ರೂಪ, ಗಿರೀಶ್, ಜ್ಞಾನ ವಿಕಾಸ ಸಮನ್ವಯಧಿಕಾರಿ ಸವಿತಾ, ಸೇವಾಪ್ರತಿನಿಧಿ ರತ್ನ, ಭವ್ಯ ಹಾಗೂ ಕೇಂದ್ರದ ಸದಸ್ಯರು ಹಾಗೂ ಶೌರ್ಯ ಘಟಕದ ಸದಸ್ಯರು ಉಪಸ್ಥಿತರಿದ್ದರು.
Advertisement







