
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬಂಟ್ವಾಳ ಇದರ ಯಶಸ್ವಿ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಪೌಷ್ಟಿಕ ಆಹಾರ ಕಾರ್ಯಕ್ರಮ
ಹಳೇಗೇಟು ನಿತ್ಯಾನಂದ ಭಜನಾ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನ ಜಾಗ್ರತಿ ವೇದಿಕೆ ಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಉದ್ಘಾಟಿಸಿದರು. ಜ್ಞಾನ ವಿಕಾಸ ಕಾರ್ಯಕ್ರಮದಿಂದ ಅನೇಕ ಮಂದಿ ಮಹಿಳೆಯರು ಸ್ವಾವಲಂಬಿಯಾಗಿ ಜೀವನ ಮಾಡುತಿದ್ದಾರೆ. ಹೇಮಾವತಿ ಹೆಗ್ಗಡೆಯವರ ಜ್ಞಾನ ವಿಕಾಸ ಕಾರ್ಯಕ್ರಮದಿಂದ ಇಂದು ಮಹಿಳೆ ಎಲ್ಲಾ ಕ್ಷೇತ್ರದಲ್ಲಿ ಗುರುತಿಸುವಂತೆ ಆಗಿದೆ ಎಂದರು.

ಕಾರ್ಯಕ್ರಮದಲ್ಲಿ ಮಹಿಳಾ ಸಾಂತ್ವನ ಕೇಂದ್ರದ ಆಪ್ತ ಸಮಾಲೋಚಕಿ ವಿದ್ಯಾ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು. ತಾಲೂಕು ಯೋಜನಧಿಕಾರಿ ಜಯಾನಂದ, ಜನಜಾಗೃತಿ ಸದಸ್ಯರಾದ ಸದಾನಂದ ನಾವೂರು, ಪ್ರವೀಣ್. ಕಾಡಬೆಟ್ಟು, ವಲಯ ಮೇಲ್ವಿಚಾರಕ ರಾಜೇಶ್, ಜ್ಞಾನ ವಿಕಾಸ ಸಮನ್ವಯಧಿಕಾರಿ ಸವಿತಾ, ಸೇವಾಪ್ರತಿನಿಧಿ ವಿಜಯ, ಹಾಗೂ ವಲಯದ ಸೇವಾಪ್ರತಿನಿಧಿಗಳು. ಜ್ಞಾನ ವಿಕಾಸ ಸದಸ್ಯರು ಉಪಸ್ಥಿತರಿದ್ದರು.
Advertisement

Advertisement








