
ಬಂಟ್ವಾಳ: ಮಂಗಳೂರಿನ ಶಕ್ತಿನಗರದ ನಾಲ್ಯಪದವು ಪಿ.ಎಂ.ಶ್ರೀ. ಕುವೆಂಪು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳ ಆಶುಭಾಷಣ ಸ್ಪರ್ಧೆಯಲ್ಲಿ ಸಿದ್ದಕಟ್ಟೆಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹಶಿಕ್ಷಕ ಮಹೇಶ್ ಕುಮಾರ್ ವಿ ಕರ್ಕೇರ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ತರಬೇತಿ ನೀಡಿದ ವಿದ್ಯಾರ್ಥಿನಿ ಕಳೆದ ಮೂರು ವರ್ಷಗಳಲ್ಲಿ ಸತತ 4 ಬಾರಿ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರುತ್ತಾರೆ.


Advertisement







