
ಬಂಟ್ವಾಳ: ಬಿ.ಸಿ.ರೋಡಿನ ಸಂಚಯಗಿರಿಯಲ್ಲಿರುವ ನಾಗರಿಕ ಕ್ರಿಯಾಸಮಿತಿಯ ಆಶ್ರಯದಲ್ಲಿ ೩೦ನೇ ಸಹಮಿಲನ ಕಾರ್ಯಕ್ರಮ ಭಾನುವಾರ ಸಂಚಯಗಿರಿಯಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಾಗರಿಕ ಕ್ರಿಯಾ ಸಮಿತಿಯ ಮಾಜಿ ಅಧ್ಯಕ್ಷ ನಾರಾಯಣ ನಾಯ್ಕ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಂಚಯಗಿರಿ ಸ್ವಚ್ಚತೆಗೆ ಹೆಸರುವಾಸಿಯಾಗಿದೆ. ಇಂದು ಮಕ್ಕಳು ಕೂಡ ಸ್ವಚ್ಚತೆಯ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿರುವುದು ಅಭಿನಮದನೀಯ. ಮುಂದಿನ ಪೀಳಿಗೆಗೆ ಈ ಜವಬ್ದಾರಿ ಯನ್ನು ತಿಳಿಸಿಕೊಡುವ ಕಾರ್ಯವನ್ನು ನಾಗರಿಕ ಕ್ರಿಯಾಸಮಿತಿಯ ಅಧ್ಯಕ್ಷ ಸುರೇಶ್ ಬಂಗೇರ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ನಾಗರಿಕ ಕ್ರಿಯಾ ಸಮಿತಿಯ ಅಧ್ಯಕ್ಷ ಸುರೇಶ್ ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ನಾಗರಿಕ ಕ್ರಿಯಾ ಸಮಿತಿ ೩೦ ವರ್ಷಗಳಿಂದ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ. ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಪುಟ್ಟ ಪ್ರತಿಭೆ ಎನ್ನುವ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿದೆ. ಅದರ ಜೊತೆಗೆ ಹಿರಿಯ ನಾಗರಿಗೆ ಗೌರವ, ಸಾಧಕರಿಗೆ ಸನ್ಮಾನ , ಬಡಮಕ್ಕಳಿಗೆ ಪುಸ್ತಕ ವಿತರಣೆ, ಕಲಾವೇದಿಕೆ ನಿರ್ಮಾಣದಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದ ಅವರು
ಸಂಚಯಗಿರಿ ಮನೆಯವರ ಸಹಕಾರ ಇಲ್ಲದೆ ಯಾವುದೇ ಕೆಲಸವನ್ನು ಮಾಡಲು ಸಾಧ್ಯವಿಲ್ಲ. ಎಲ್ಲರಿಗೂ ಕೃತಜ್ಞತೆ ಅರ್ಪಿಸುವುದಾಗಿ ತಿಳಿಸಿದರು. ಸಂಚಯಗಿರಿಯ ಇಬ್ಬರು ಹಿರಿಯ ನಾಗರಿಕರನ್ನು ಗೌರವಿಸಲಾಯಿತು. ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವಾಭಿನಂದನೆ ನೀಡಲಾಯಿತು.



ಆಟೋಟ ಸ್ಪರ್ಧೆಯಲ್ಲಿ ವಿಜೇತರಾದರಿಗೆ ಬಹುಮಾನ ವಿತರಿಸಲಾಯಿತು.
ಮುಖ್ಯ ಅತಿಥಿಯಾಗಿ ಆನಂದ ತೀರ್ಥ ಭಾಗವಹಿಸಿದ್ದರು. ಉಪಾಧ್ಯಕ್ಷೆ ತಾಯಮ್ಮ, ಕ್ರೀಡಾ ಕಾರ್ಯದರ್ಶಿ ಧನಂಜಯ ಬಾಳಿಗ ಉಪಸ್ಥಿತರಿದ್ದರು.
ಕಾರ್ಯದರ್ಶಿ ಹರೀಶ್ ಶೆಣೈ ಸ್ವಾಗತಿಸಿದರು. ಕೋಶಾಧಿಕಾರಿ ದಾಮೋದರ ಎ. ವಂದಿಸಿದರು.
ಸತೀಶ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭ ನಾಗರಿಕ ಕ್ರಿಯಾಸಮಿತಿಯ ಅಧ್ಯಕ್ಷ ಸುರೇಶ್ ಬಂಗೇರ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಬಳಿಕ ಸ್ಥಳೀಯ ಪ್ರತಿಭೆಗಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು.
—
Sandeep Salian
Advertisement







