
ಬಂಟ್ವಾಳ: ಉಡುಪಿಯ ಶಿರ್ವ ಡಾನ್ ಬಾಸ್ಕೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೊಡಾಕ್ ಅಡ್ವೆಂಚರ್ ಪ್ರೈ.ಲಿ. ಆಶ್ರಯದಲ್ಲಿ ನಡೆದ ಅಂತರ್ ಶಾಲಾ ಸಾಂಪ್ರದಾಯಿಕ ಬಿಲ್ಲು ವಿದ್ಯೆ ಪಂದ್ಯಾಟದಲ್ಲಿ ವೈಯಕ್ತಿಕ ವಿಭಾಗದಲ್ಲಿ ಬಂಟ್ವಾಳ ತಾಲೂಕಿನ ಗ್ರಾಮೀಣ ಪ್ರದೇಶವಾದ ಕೊಡ್ಮಾಣ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಮನ್ವಿತಾ ಪ್ರಥಮ ಸ್ಥಾನ ಹಾಗೂ ಇದೇ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಧನ್ವಿ ಹಾಗೂ ನೆತ್ತರಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 4 ನೇ ತರಗತಿ ವಿದ್ಯಾರ್ಥಿ ಯಕ್ಷಿತ್ ದ್ವಿತೀಯ ಸ್ಥಾನ ಗೆದ್ದುಕೊಂಡಿದ್ದಾರೆ.


ಈ ವಿದ್ಯಾರ್ಥಿಗಳು ನೆತ್ತರೆಕೆರೆ ಸರಕಾರಿ ಶಾಲೆಯ ತರಬೇತಿ ಕೇಂದ್ರದಲ್ಲಿ ತರಬೇತಿಯನ್ನು ಪಡೆಯುತ್ತಿದ್ದು ವಿದ್ಯಾರ್ಥಿಗಳ ಸಾಧನೆಗೆ ನೆತ್ತರಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಾಮೋದರ ನೆತ್ತರೆಕೆರೆ ಹಾಗೂ ಕೊಡ್ಮಾಣ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಮಾಧವಿ ಮೆಚ್ಚುಗೆ ವ್ಯಕ್ಯಪಡಿಸಿದ್ದಾರೆ.
Advertisement







