
ಬಂಟ್ವಾಳ: ಕೇಂದ್ರದ ಮಾಜಿ ವಿತ್ತ ಸಚಿವ ಚಿ. ಜನಾರ್ದನ ಪೂಜಾರಿಯವರ ಬಂಟ್ವಾಳದ ಮನೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಭೇಟಿ ನೀಡಿದರು. ಡಿಸಿಎಂ ಗೆ ಶಾಲು ಹಾಕಿ ಪೂಜಾರಿಯವರು ಬರಮಾಡಿಕೊಂಡರು. ಪೂಜಾರಿಯವರ ಆರೋಗ್ಯ ಕ್ಷೇಮ ವಿಚಾರಿಸಿದ ಡಿಕೆಶಿ ಕೆಲಹೊತ್ತುಗಳ ಕಾಲ ಅವರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭ ಮಾಜಿ ಸಚಿವರಾದ ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಬೂಡ ಅಧ್ಯಕ್ಷ ಬೇಬಿ ಕುಂದರ್. ಪಕ್ಷದ ಮುಖಂಡರಾದ ಇನಾಯತ್ ಆಲಿ, ಇಬ್ರಾಹಿಂ ನವಾಝ್ ಮತ್ತಿತರರು ಉಪಸ್ಥಿತರಿದ್ದರು.



Advertisement







