
ಬಂಟ್ವಾಳ: ದ.ಕ. ಜಿಲ್ಲಾ ಕೆಂದ್ರ ಸಹಕಾರಿ ಬ್ಯಾಂಕ್ ನಿ., ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ದ.ಕ. ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಳ ಬಿ.ಸಿ.ರೋಡು . ಸಹಕಾರ ಇಲಾಖೆ ದ.ಕ. ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ದ.ಕ. ಜಿಲ್ಲೆಯ ಪತ್ತಿನ, ಮೂರ್ತೆದಾರರ ಮತ್ತು ಇತರ ಸಹಕಾರ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾಮಟ್ಟದ ತರಬೇತಿ ಕಾರ್ಯಕ್ರಮ ಫೆ. ೨೧ರಂದು ಶನಿವಾರ ಬೆಳಿಗ್ಗೆ ೯ ಗಂಟೆಗೆ ಬಿ.ಸಿ.ರೋಡಿನ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ನಡೆಯಲಿದೆ.
ದ.ಕ. ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಳ ನಿ. ದ ಅಧ್ಯಕ್ಷ ಕೆ. ಸಂಜೀವ ಪೂಜಾರಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ಬಿ. ಪದ್ಮಶೇಖರ್ ಜೈನ್, ಸವಿತಾ ಎನ್. ಶೆಟ್ಟಿ, , ಸಹಕಾರ ಸಂಘಗಳ ಉಪನಿಬಂಧಕ ಹೆಚ್.ಎನ್. ರಮೇಶ್, ಸಹಾಯಕ ನಿಬಂಧಕಿ ತ್ರಿವೇಣಿ ರಾವ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


Advertisement







