
ಬಂಟ್ವಾಳ : ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ವಿದ್ಯಾರ್ಥಿನಿ ಭಾರ್ಗವಿ ಯು.ಎಸ್ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಎಂ.ಕಾಂ ಪರೀಕ್ಷೆಯಲ್ಲಿ 7ನೇ ರ್ಯಾಂಕ್ ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ.
ಇವರು ಪುಂಜಾಲಕಟ್ಟೆಯ ನಿವಾಸಿ ಉಮಾನಾಥ್ ಮತ್ತು ಶ್ರೀಲತಾ ಎಂ.ಜೆ ದಂಪತಿಯ ಪುತ್ರಿಯಾಗಿದ್ದು, ಕಳೆದ ಬಾರಿಯ ಕೆ-ಸೆಟ್ (ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ) . ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ 97ನೇ ರ್ಯಾಂಕ್ ಪಡೆದು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹರಾಗಿದ್ದರು.


Advertisement







