
ಬಂಟ್ವಾಳ :ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೆ. ಎಸ್. ಹೆಗ್ಡೆ ಆಸ್ಪತ್ರೆ, ದೇರಳಕಟ್ಟೆ ಇವರ ಸಹಯೋಗದಲ್ಲಿ 135ನೇ ರಕ್ತದಾನ ಶಿಬಿರವು ಮಾ.29ರಂದು ಭಾನುವಾರ ಬೆಳಿಗ್ಗೆ ಗಂಟೆ 9ರಿಂದ 1ರ ವರೆಗೆ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ನಡೆಯಲಿದೆ.
ಬಂಟ್ವಾಳ ಉಪವಿಭಾಗದ ಎಎಸ್ಪಿ ಯಶ್ ಕುಮಾರ್ ಶರ್ಮ ಶಿಬಿರ ಉದ್ಘಾಟಿಸುವರು, ರೋಟರಿ ಜಿಲ್ಲಾ ಮಾಜಿ ಗವರ್ನರ್ ಎನ್. ಪ್ರಶಾಂತ್ ಕಾರಂತ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ಸೇವಾಂಜಲಿ ಪ್ರತಿಷ್ಠಾನ ಆಡಳಿತ ಟ್ರಸ್ಟಿ ಕೆ ಕೃಷ್ಣಕುಮಾರ್ ಪೂಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Advertisement







