
ಉಳ್ಳಾಲ: ಮಂಗಳೂರು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ತೊಕ್ಕೊಟ್ಟಿನ
ಹೊಟೇಲ್ ವಿನಮ್ರ ರೆಸ್ಟೋರೆಂಟ್ ನ ಸಭಾಂಗಣದಲ್ಲಿ ಮಂಗಳೂರು ಮಂಡಲ ಒಬಿಸಿ ಮೋರ್ಚಾದ ಅಧ್ಯಕ್ಷ ಗಣೇಶ್ ಸುವರ್ಣ ತುಂಬೆ ಇವರ ಅಧ್ಯಕ್ಷತೆಯಲ್ಲಿ ಬುಧವಾರ ಸಂಜೆ ನಡೆಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ದೀಪ ಪ್ರಜ್ವಲಿಸಿ ಬಳಿಕ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ಜಿಲ್ಲೆಯ ಬಿಜೆಪಿ ಓಬಿಸಿ ಮೋರ್ಚಾ ಕ್ರಿಯಾಶೀಲವಾಗಿದ್ದುಕೊಂಡು ಉತ್ತಮವಾದ ಕೆಲಸವನ್ನು ಮಾಡುತ್ತಿದೆ. ನೂತನ ಅಧ್ಯಕ್ಷರಾಗಿರುವ ಗಣೇಶ್ ಸುವರ್ಣ ಪುದು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಯಶಸ್ವಿಯಾಗಿ ಕೆಲಸ ನಿರ್ವಹಿಸಿದ್ದು ಈಗ ಅವರ ಜೊತೆ ಉತ್ತಮ ತಂಡವಿದೆ ಎಂದರು. ಸಂಘಟನೆಯನ್ನು ಬಲಪಡಿಸುವ ದೊಡ್ಡ ಜವಬ್ದಾರಿ ನಮ್ಮೆಲ್ಲರ ಮೇಲಿದೆ. ಸಂಘಟನೆಗೆ ಚ್ಯುತಿ ಬಾರದಂತೆ ಕೆಲಸ ಮಾಡಬೇಕು ಎಂದು ತಿಳಿಸಿದರು.
ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಕುವೈತ್ತಬೈಲು ಮಂಗಳೂರು ಮಂಡಲ ಒಬಿಸಿ ಮೋರ್ಚಾದ ನೂತನ ಪದಾಧಿಕಾರಿಗಳ ಪಟ್ಟಿ ಘೋಷಣೆ ಮಾಡಿದರು.
ಅವರು ಮಾತನಾಡಿ ಮಂಗಳೂರು ಮಂಡಲದ ಓಬಿಸಿ ಮೋರ್ಚಾ ಜಿಲ್ಲೆಯಲ್ಲಿಯೇ ನಂ.1 ಸ್ಥಾನದಲ್ಲಿದ್ದುಕೊಂಡು ಕೆಲಸ ನಿರ್ವಹಿಸಬೇಕೆಂದು ತಿಳಿಸಿದರು.

ಒಬಿಸಿ ಮೋರ್ಚಾದ ಜಿಲ್ಲಾಧ್ಯಕ್ಷ ಮಹೇಶ್ ಜೋಗಿ ಮಾತನಾಡಿ ಒಬಿಸಿ ಮೋರ್ಚಾದ ಜವಾಬ್ದಾರಿ ಹಾಗೂ ಕರ್ತವ್ಯದ ಬಗ್ಗೆ ತಿಳಿಸಿದರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಿರುವುದು ಶ್ರೇಷ್ಠ ಕಾರ್ಯ ಎಂದರು.
ಮಂಗಳೂರು ಮಂಡಲದ ಓಬಿಸಿ ಮೋರ್ಚಾದ ಅಧ್ಯಕ್ಷ ಗಣೇಶ್ ಸುವರ್ಣ ಸಭಾಧ್ಯಕ್ಷತೆ ವಹಿಸಿ ಮಾತನಾಡಿ ಸಂಘಟನೆಯ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ. ಜಿಲ್ಲೆಯಿಂದ ಯಾವುದೇ ಸೂಚನೆ ಬಂದಾಗ ಒಮ್ಮತದಿಂದ ಕೆಲಸ ಮಾಡೋಣ ಎಂದರು
ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಹಾಗೂ ಮಂಗಳೂರು ಮಂಡಲ ಪ್ರಭಾರಿ ಪೂಜಾ ಪೈ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಎಸ್. ಎಸ್. ಎಲ್. ಸಿ ಮತ್ತು ಪಿ ಯು ಸಿ ಯಲ್ಲಿ ಅತ್ಯಧಿಕ ಅಂಕ ಪಡೆದು ತೇರ್ಗಡೆ ಹೊಂದಿದ ಹಿಂದುಳಿದ ವರ್ಗದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ವೇದಿಕೆಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಧನಲಕ್ಷ್ಮಿ ಗಟ್ಟಿ, ಜಿಲ್ಲಾ ಓಬಿಸಿ ಮೋರ್ಚಾದ ಉಪಾಧ್ಯಕ್ಷ ವಸಂತ ಹೊಸಬೆಟ್ಟು, ಮಂಗಳೂರು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ರಾಜ್ ಕೆ. ಆರ್, ದಯಾನಂದ ತೊಕ್ಕೊಟ್ಟು, ಪ್ರಭಾರಿ, ಮಂಡಲ ಉಪಾಧ್ಯಕ್ಷ ರವಿಶಂಕರ್ ಸೋಮೇಶ್ವರ, ಒಬಿಸಿ ಜಿಲ್ಲಾ ಕಾರ್ಯದರ್ಶಿಗಳಾದ ರವಿ ಸೋವೂರು, ಸಂಪತ್ ಕುಕ್ಯಾನ್, ಒಬಿಸಿ ಜಿಲ್ಲಾ ಸಮಿತಿ ಸದಸ್ಯೆ ಶಶಿಕಲಾ ಬೊಳ್ಳೆ ಕುಮೇರು ಉಪಸ್ಥಿತರಿದ್ದರು.
ಮಂಗಳೂರು ಮಂಡಲ ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶೇಖರ್ ಕನೀರ್ ತೋಟ ಸ್ವಾಗತಿಸಿದರು .
ಜಿಲ್ಲಾ ಕಾರ್ಯಕಾರಿಣಿ ಸದಸ್ಯೆ ರಾಜೀವಿ ಕೆಂಪು ಮಣ್ಣು ವಂದೇ ಮಾತರಂ ಹಾಡಿದರು. ಇನ್ನೋರ್ವ ಪ್ರಧಾನ ಕಾರ್ಯದರ್ಶಿ ಗಣೇಶ್ ಕಾಪಿಕಾಡು ವಂದಿಸಿದರು .ಕೋಶಾಧಿಕಾರಿ ಪ್ರವೀಣ್ ಬಗಂಬಿಲ ಕಾರ್ಯಕ್ರಮ ನಿರೂಪಿಸಿದರು.

Advertisement







