
ಬಂಟ್ವಾಳ: ಭರತನಾಟ್ಯ ಕಲಾ ಸೇವೆಯನ್ನು ಗುರುತಿಸಿ ಪ್ರತಿಷ್ಠಿತ ಅಂತರಾಷ್ಟ್ರೀಯ ಆರ್ಯಭಟ – 2026 ಪ್ರಶಸ್ತಿಯನ್ನು ಶ್ರೀ ದೇವಿ ನೃತ್ಯಾರಾಧನಾ ಕಲಾ ಕೇಂದ್ರ (ರಿ) ಪುತ್ತೂರು ಇದರ ನೃತ್ಯಗುರು ವಿದುಷಿ ರೋಹಿಣಿ ಉದಯ್ ಇವರಿಗೆ ಇಂದು ಪ್ರದಾನ ಮಾಡಲಾಯಿತು.

ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ , ಅತಿಥಿಗಳಾದ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿಗಳಾದ ರಾಜೇಂದ್ರ ಬಾದಾಮಿಕರ್, ನಾಡೋಜ ಡಾ. ಮಹೇಶ್ ಜೋಶಿ, ಅಂತರಾಷ್ಟ್ರೀಯ ವಿದ್ವಾಂಸರಾದ ಅರಳುಮಲ್ಲಿಗೆ ಪಾರ್ಥಸಾರಥಿ, ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಹೆಚ್ ಎಲ್ ಎನ್ ರಾವ್, ಇವರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ನಡೆಯಿತು
Advertisement

Advertisement








