
ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ, ಕೇಂದ್ರ ಸರಕಾರದ ಗ್ರಾಮೀಣಾಭಿವೃದ್ಧಿ ಫೌಂಡೇಶನ್ ಇದರ ಸಹಯೋಗದಿಂದಿಗೆ ರೂಟ್ಯಾಗ್ ಸ್ಮಾರ್ಟ್ ವಿಲೇಜ್ ಸೆಂಟರ್ ವತಿಯಿಂದ ಮಾಹಿತಿ, ತಂತ್ರಜ್ಞಾನ ಶಿಬಿರ ಬುಧವಾರ ಫರಂಗಿಪೇಟೆಯ ಸೇವಾಂಜಲಿಯಲ್ಲಿ ನಡೆಯಿತು.
ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಕಾರ್ಯಕ್ರಮ ಉದ್ಘಾಟಿಸಿದರು. ಸೆಕ್ಷನ್ ಇನ್ಫಿನ್ 8 ನ ಸ್ಥಾಪಕ ನಿರ್ದೇಶಕ ವಿಶ್ವಾಸ್ ವಿ.ಎಸ್. ಮಾಹಿತಿ ನೀಡಿ ಉತ್ತರ ಭಾರತದಲ್ಲಿ ರೂಟೇಜ್ ಸ್ಮಾರ್ಟ್ ವಿಲೇಜ್ ಸೆಂಟರ್ ಸಾಕಷ್ಟು ಕಾರ್ಯನಿರ್ವಹಿಸುತ್ತಿವೆ. ಆದರೆ ದಕ್ಷಿಣ ಭಾರತದಲ್ಲಿ ಕಾರ್ಕಳದ ನಿಟ್ಟೆ ಹಾಗೂ ಬಂಟ್ವಾಳದ ಫರಂಗಿಪೇಟೆಯಲ್ಲಿ ಮಾತ್ರ ಇದೆ. ಗ್ರಾಮೀಣ ಭಾಗದಲ್ಲಿ ಜನರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ಅವರಿಗೆ ವೃತ್ತಿಗೆ ಪೂರಕವಾಗುವ ತಂತ್ರಜ್ಞಾನವನ್ನು ಅಭಿವೃದ್ದಿ ಪಡಿಸುವ ಕಾರ್ಯ ಈ ಸಂಸ್ಥೆಯ ಮೂಲಕ ನಡೆಯುತ್ತಿದೆ ಎಂದರು.

ಸೇವಾಂಜಲಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚೇತನ್, ದಂತ ಚಿಕಿತ್ಸಾ ಕೇಂದ್ರದ ವೈದ್ಯಾಧಿಕಾರಿ ಡಾ. ಪ್ರತೀಕ್ಷಾ ಕುಡ್ವ, ಡಾ. ರೀಮಾ, ಮೇರಮಜಲು ಗ್ರಾ.ಪಂ. ಮಾಜಿ ಅಧ್ಯಕ್ಷೆ ಬೃಂದಾ ಪೂಜಾರಿ, ಸೇವಾಂಜಲಿ ಪ್ರತಿಷ್ಠಾನದ ಟ್ರಸ್ಟಿಗಳಾದ ತೇವು ತಾರಾನಾಥ ಕೊಟ್ಟಾರಿ, ನಾರಾಯಣ ಬಡ್ಡೂರು ಉಪಸ್ಥಿತರಿದ್ದರು.

Advertisement







