
ಬಂಟ್ವಾಳ: 2026-27ನೇ ಸಾಲಿನ ವಿವಿಧ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿ ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಸಮುದಾಯ ಭವನದ ಮೇಲಂತಸ್ತಿನ ಕಟ್ಟಡ ನಿರ್ಮಾಣಕ್ಕೆ ರಾಜ್ಯ ಸರಕಾರದಿಂದ 1 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ.
ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಹಾಗೂ ಮೇಲಂತಸ್ತಿನ ಕಟ್ಟಡ ನಿರ್ಮಾಣ ಸಮಿತಿ ವತಿಯಿಂದ ಬಿ.ಮೂಡ ಗ್ರಾಮದ ಬಿ.ಸಿ.ರೋಡಿನ ಪೊಸಳ್ಳಿಯಲ್ಲಿ ಸಮುದಾಯ ಭವನದ ಮೇಲ್ತಂತಸ್ತಿನ ಕಾಮಗಾರಿ ನಡೆಯುತ್ತಿದ್ದು ಮಾಜಿ ಸಚಿವ ಬಿ.ರಮಾನಾಥ ರೈಯವರ ಶಿಫಾರಸ್ಸಿನ ಮೇರೆಗೆ, ಮೇಲಂತಸ್ತಿನ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ, ಮಂಗಳೂರು ವಿವಿ ಸಿಂಡಿಕೇಟ್ ಪ್ರಾಧಿಕಾರದ ಸದಸ್ಯ ಸುರೇಶ್ ಕುಮಾರ್ ನಾವೂರು ಅವರ ವಿಶೇಷ ಪ್ರಯತ್ನ ಹಾಗೂ ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಮುಖಂಡರ ಸಹಕಾರದಲ್ಲಿ ಅನುದಾನಕ್ಕೆ ಬೇಡಿಕೆ ಸಲ್ಲಿಸಲಾಗಿದ್ದು ತಕ್ಷಣ ಸ್ಪಂದಿಸಿರುವ ಮುಖ್ಯಮಂತ್ರಿಗಳು ಈ ವಿಶೇಷ ಅನುದಾನ ಮಂಜೂರಾಗಿರುವುದಾಗಿ ತಿಳಿದು ಬಂದಿದೆ.


ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಸಮುದಾಯ ಭವನದ ಮೇಲಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಅನುದಾನ ಒದಗಿಸಿದ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅನುದಾನ ಮಂಜೂರುಗೊಳಿಸಲು ಶ್ರಮಿಸಿದ ಮಾಜಿ ಸಚಿವ ಬಿ.ರಮಾನಾಥ ರೈಯವರಿಗೆ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ನಾವೂರು ಕೃತಜ್ಞತೆ ಸಲ್ಲಿಸಿದ್ದಾರೆ.
Advertisement







