
ಬಂಟ್ವಾಳ: ಮದ್ಯ ವ್ಯಸನಿಗಳ ಮನ ಪರಿವರ್ತನೆಯ ಕಾರ್ಯ ಮದ್ಯವರ್ಜನ ಶಿಬಿರದ ಮೂಲಕ ಆಗುತ್ತಿದೆ.
ಸಮಾಜಮುಖಿಯಾಗಿ ಸುಧಾರಣೆಯಾಗಲು ಇದು ಮೊದಲ ಹೆಜ್ಜೆ ಎಂದು ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷ ಶ್ರೀಪಾದ ಪಾಂಗಣ್ಣಾಯ ಹೇಳಿದರು.
ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ವಾಮದಪದವು ಇದರ ಆಶ್ರಯದಲ್ಲಿ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ 8 ದಿನಗಳ ಕಾಲ ವಾಮದಪದವು ಬಸ್ತಿಕೋಡಿಯ ಪದ್ಮಾವತಿ ಸಭಾಭವನದಲ್ಲಿ ನಡೆಯಲಿರುವ 2076ನೇ ಮದ್ಯವರ್ಜನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಶಿಬಿರದ ವ್ಯವಸ್ಥಾಪನ ಸಮಿತಿಯ ಗೌರವಾಧ್ಯಕ್ಷ, ಉದ್ಯಮಿ ಹರೀಂದ್ರ ಪೈ ನೈನಾಡು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ವ್ಯಸನ ಮುಕ್ತ ಜೀವನ ನಡೆಸುವ ನಿಟ್ಟಿನಲ್ಲಿ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಉತ್ತಮವಾದ ಕಾರ್ಯವನ್ನು ಮಾಡುತ್ತಿದೆ. ದುಶ್ಚಟವನ್ನು ದೂರ ಮಾಡಿ ಉತ್ತಮ ಜೀವನ ನಡೆಸಲು ಈ ಶಿಬಿರ ಪ್ರೇರಣೆಯಾಗಲಿದೆ ಎಂದರು.
ಬಂಟ್ವಾಳ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ ರೋನಾಲ್ಡ್ ಡಿಸೋಜಾ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್
ಜಿ.ಪಂ. ಮಾಜಿ ಸದಸ್ಯ ತುಂಗಪ್ಪ ಬಂಗೇರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಡಿ. ಶಿಬಿರಕ್ಕೆ ಶುಭ ಹಾರೈಸಿ ಮಾತನಾಡಿದರು.

ಜನಜಾಗೃತಿ ವೇದಿಕೆಯ ನಿಯೋಜಿತ ಅಧ್ಯಕ್ಷ ರಾಜರಾಮ ಶೆಟ್ಟಿ , ಜಿ.ಪಂ. ಮಾಜಿ ಸದಸ್ಯರಾದ ಪದ್ಮಶೇಖರ್ ಜೈನ್
ಸುಲೋಚನಾ ಭಟ್, ಕೇಂದ್ರ ಒಕ್ಕೂಟದ ಅಧ್ಯಕ್ಷ ಚಿದಾನಂದ ರೈ ಕಕ್ಯ, ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಎಎಸೈ ಚಿದಾನಂದ, ಶಿಬಿರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಉಪಾಧ್ಯಕ್ಷರಾದ ಗೋಪಾಕೃಷ್ಣ ಚೌಟ
ಪುರುಷೋತ್ತಮ ಶೆಟ್ಟಿ ವಾಮದಪದವು, ಪ್ರವೀಣ್ ಕಾಡಬೆಟ್ಟು, ಸದಾನಂದನಾವೂರು, ಕೃಷ್ಣಪ್ಪ ಅಲ್ಲಿಪಾದೆ
ಜಗದೀಶ್ ಕೊಯಿಲಾ, ಮಾಣಿಕ್ಯ ರಾಜ್ ಜೈನ್, ಅರ್ಕಕೀರ್ತಿ ಇಂದ್ರ,ಆನಂದ ಆಚಾರ್ಯ, ಮೋಹನ್ ಸಾಲ್ಯಾನ್
ಪುರುಷೋತ್ತಮ ಪೂಜಾರಿ ಸರಪಾಡಿ, ಪ್ರಕಾಶ್ ಪೂಜಾರಿ
ಸದಾನಂದ ಶೀತಲ್, ಭಾರತಿ ಚೌಟ, ಅರುಣ್ ಕುಮಾರ್ ಇಂದ್ರ, ಶೇಖರ್ ಸಾಮಾನಿ, ಹರೀಶ್ ಪ್ರಭು, ಶಿಬಿರಾಧಿಕಾರಿ ರಮೇಶ್, ಆರೋಗ್ಯ ಸಹಾಯಕಿ ಜಯಲಕ್ಷ್ಮೀ
ಚೆನ್ನೈತ್ತೋಡಿ ಗ್ರಾ.ಪಂ. ಮಾಜಿ ಅಧ್ಯಕ್ಷೆ ವನಿತಾ , ಪ್ರಕಾಶ್
ಉಪಸ್ಥಿತರಿದ್ದರು.
ಯೋಜನಾಧಿಕಾರಿ ಜಯಾನಂದ ಪಿ. ಸ್ವಾಗತಿಸಿದರು ಜನಜಾಗೃತಿ ವೇದಿಕೆ ಉಡುಪಿ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.
ಜ್ಞಾನ ವಿಕಾಸ ಸಮನ್ವಯಾಧಿಕಾರಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ಮಾಧವ ವಂದಿಸಿದರು.
Advertisement







