
ಬಂಟ್ವಾಳ: ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ಇದರ ಬಂಟ್ವಾಳ ವಲಯದ ವತಿಯಿಂದ ಜಿಲ್ಲಾ ಮಟ್ಟದ ಎ ಐ ಕಾರ್ಯಾಗಾರ ಬಿ.ಸಿ.ರೋಡಿನ ರೋಟರಿ ಕ್ಲಬ್ ಸಭಾಂಗಣದಲ್ಲಿ ನಡೆಯಿತು. ವಲಯಧ್ಯಕ್ಷ ರಾಜೇಂದ್ರ ಕೆ. ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಎಸ್ ಕೆ ಪಿ ಎ ಜಿಲ್ಲಾ ಧ್ಯಕ್ಷ ನವೀನ್ ರೈ ಪಂಜಲ ಉದ್ಘಾಟಿಸಿದರು. ವೇದಿಕೆ ಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜಯ್ ಮಂಗಳೂರು, ಜಿಲ್ಲಾ ಕಟ್ಟಡ ಸಮಿತಿ ಅಧ್ಯಕ್ಷ ಆನಂದ್ ಯನ್. ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಹರೀಶ್ ಕುಂದರ್, ಗೌರವಾಧ್ಯಕ್ಷ ಕಿಶೋರ್, ಛಾಯಾ ಕಾರ್ಯದರ್ಶಿ ಪ್ರಶಾಂತ್ ಉಪಸ್ಥಿತರಿದ್ದರು.
ಕಾರ್ಯದರ್ಶಿ ರವಿ ಕಲ್ಪನೆ ಸ್ವಾಗತಿಸಿ, ಕೋಶಾಧಿಕಾರಿ ಕೃಷ್ಣ ರಾಜ್ ರಾವ್ ವಂದಿಸಿದರು. ದಯಾನಂದ್ ಬಂಟ್ವಾಳ್ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಸಂಪನ್ಮೂಲ ವ್ಯಕ್ತಿ ಸಂದೀಪ್ ಶ್ಯಾಡೋ ರವರು ಸದಸ್ಯ ರಿಗೆ ಎಐ ಕಾರ್ಯಾಗಾರ ನಡೆಸಿ ಕೊಟ್ಟರು.


Advertisement







