
ಬಂಟ್ವಾಳ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ನಮ್ಮಾಭಿಮಾನದ ಅಭಿನಂದನೆ ಕಾರ್ಯಕ್ರಮ ಜು.11 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ಅರಮನೆ ಮೈದಾನ ಮೇಕ್ರಿ ಸರ್ಕಲ್ ಬಳಿ ಗೇಟ್ . 2 ರ ತ್ರಿಪುರವಾಸಿನಿಯಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ. ನಿರ್ಮಲಾನಂದ ಮಹಾಸ್ವಾಮಿಜೀ, ತುಮಕೂರು ಸಿದ್ದಗಂಗಾ ಮಠದ ಅಧ್ಯಕ್ಷರಾದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ದಿವ್ಯಸಾನಿಧ್ಯದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಅಭಿನಂದನೆ ಸ್ವೀಕರಿಸಲಿರುವರು. ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಉಪಸ್ಥಿತರಿರುವರು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅಧ್ಯಕ್ಷತೆ ವಹಿಸುವರು. ಈ ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸರಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷರು, ಹಾಗೂ ಕಾರ್ಯದರ್ಶಿ ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ
Advertisement







