
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಲ್ಕೆಮಾರ್ ಒಕ್ಕೂಟದ ಪದಗ್ರಹಣ ಸಮಾರಂಭ ಮತ್ತು ಆಟಿಡೋಂಜಿ ದಿನ ಕಾರ್ಯಕ್ರಮ ಭಾನುವಾರ ನಲ್ಕೆಮಾರ್ ಸ.ಹಿ.ಪ್ರಾ. ಶಾಲೆಯಲ್ಲಿ ನಡೆಯಿತು.
ಬಂಟ್ವಾಳ ತಾಲೂಕು ಬಿಲ್ಲವ ಸಮಾಜದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಕಾರ್ಯಕ್ರಮ ಉದ್ಘಾಟಿಸಿದರು. ಜೆಸಿಐ ವಲಯ ತರಬೇತುದಾರ ಸಂದೀಪ್ ಸಾಲ್ಯಾನ್ ಆಟಿಯ ಮಹತ್ವದ ಬಗ್ಗೆ ತಿಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಡಿ. ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರ ಮಾಡಿದರು. ಶಾಲಾ ಮುಖ್ಯ ಶಿಕ್ಷಕಿ ಜ್ಯೋತಿ ಶುಭ ಹಾರೈಸಿದರು. ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ರೋನಾಲ್ಡ್ ಡಿಸೋಜಾ ಅಧ್ಯಕ್ಷತೆ ವಹಿಸಿದ್ದರು.

ಒಕ್ಕೂಟದ ಅಧ್ಯಕ್ಷ ಥೋಮಸ್, ಅಮ್ಟಾಡಿ ಗ್ರಾಮ ಪಂಚಾಯತಿನ ನಿಕಟಪೂರ್ವ ಅಧ್ಯಕ್ಷ ವಿಜಯ್ ಕುಮಾರ್ ಮತ್ತು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಯರಾಮ್ ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕ ಗಿರೀಶ್ ಸ್ವಾಗತಿಸಿದರು. ಸೇವಾ ಪ್ರತಿನಿಧಿ ವಿಜಯಲಕ್ಷ್ಮಿ ವರದಿ ವಾಚಿಸಿದರು. ಒಕ್ಕೂಟದ ಕೋಶಾಧಿಕಾರಿ ಶಶಿಪ್ರಭಾ ವಂದಿಸಿದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಅಶ್ವಿನಿ ಹಾಗೂ ಶಿಕ್ಷಕ ದಾಮೋದರ ಏರ್ಯ ಕಾರ್ಯಕ್ರಮ ನಿರೂಪಿಸಿದರು.
Advertisement







