
ಬಂಟ್ವಾಳ: ಸ್ನೇಹ ಮಿಲನ ಕಲ್ಲಡ್ಕ ಮತ್ತು ರೋಟರಿ ಕ್ಲಬ್ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಎ.ಜೆ.ವೈದ್ಯಕೀಯ ಮಹಾವಿದ್ಯಾಲಯ ಕುಂಟಿಕಾನ ಮಂಗಳೂರು ಇವರ ಸಹಭಾಗಿತ್ವದಲ್ಲಿ ಉಚಿತ ಹೃದಯ ತಪಾಸಣಾ ಶಿಬಿರ ರೋಟರಿ ಕ್ಲಬ್ ಸಭಾಭವನದಲ್ಲಿ ಭಾನುವಾರ ನಡೆಯಿತು.
ಬಂಟ್ವಾಳ ತಾಲೂಕು ಗಾಣಿಗ ಸೇವಾ ಸಂಘದ ಅಧ್ಯಕ್ಷ ಕೃಷ್ಣಪ್ಪ ಗಾಣಿಗ ಶಿಬಿರ ಉದ್ಘಾಟಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎ.ಜೆ. ಆಸ್ಪತ್ರೆಯ ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ವಾಮನ ನಾಯಕ್ ಮಾತನಾಡಿ
ನಿಯಮಿತ ವಾಗಿ ಆರೋಗ್ಯ ತಪಾಸಣೆ ಮಾಡುವುದರಿಂದ ಹೃದಯ ರೋಗ ಸಹಿತ ಎಲ್ಲಾ ರೋಗಗಳಿಂದಲೂ ದೂರವಿರಲು ಸಾಧ್ಯವಿದೆ. ಮನುಷ್ಯನಿಗೆ ಆರೋಗ್ಯ ಅತೀ ಮುಖ್ಯವಾಗಿದ್ದು ಕನಿಷ್ಠ ವರ್ಷಕ್ಕೊಮ್ಮೆಯಾದರೂ ಆರೋಗ್ಯ ತಪಾಸಣೆ ಮಾಡಬೇಕು ಎಂದು ತಿಳಿಸಿದರು.

ದುರ್ಗಾ ಫೆಸಿಲಿಟಿ ಮ್ಯಾನೇಜ್ ಮೆಂಟ್ ಸರ್ವಿಸಸ್ ಪ್ರೈ. ಲಿ. ನ ಆಡಳಿತ ನಿರ್ದೇಶಕ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಮಾತನಾಡಿ ವೈದ್ಯರ ಸೂಚನೆಯಂತೆ ಕಾಲಾನುಕಾಲಕ್ಕೆ ಆರೋಗ್ಯ ತಪಾಸಣೆಯನ್ನು ಮಾಡಿದ್ದಲ್ಲಿ ಆಯುಷ್ಯವನ್ನು ವೃದ್ಧಿ ಮಾಡಲು ಸಾಧ್ಯವಿದೆ ಎಂದರು.
ನರಿಕೊಂಬು ನಾಲ್ಕೈತ್ತಾಯ ಪಂಜುರ್ಲಿ ನೇಮೋತ್ಸವ ಸಮಿತಿ ಅಧ್ಯಕ್ಷ ಜಗನ್ನಾಥ ಬಂಗೇರ ನಿರ್ಮಲ್ ಮಾತನಾಡಿ ಪ್ರಸ್ತುತ ಕಾಲಘಟ್ಟದಲ್ಲಿ ಮನುಷ್ಯನ ಆರೋಗ್ಯ ಕುಸಿಯುತ್ತಿದೆ.ಈ ನಿಟ್ಟಿನಲ್ಲಿ ಜನರಿಗೆ ಅಗತ್ಯವಾಗಿ ಬೇಕಾಗಿರುವಂತಹ ಹೃದಯ ತಪಾಸಣಾ ಶಿಬಿರ ಹಮ್ಮಿಕೊಳ್ಳುವ ಮೂಲಕ ಸ್ನೇಹ ಮಿಲನ ಹಾಗೂ ರೋಟರಿ ಕ್ಲಬ್ ಬಂಟ್ವಾಳ ಮಾದರಿ ಕಾರ್ಯ ಮಾಡಿದೆ ಎಂದರು.
ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ರವಿಚಂದ್ರ ಬಂಟ್ವಾಳ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅವರು ಮಾತನಾಡಿ ಸೇವಾ ಕಾರ್ಯಕ್ರಮಗಳನ್ನು ಸಂಘಟಿಸುವುದು ರೋಟರಿ ಸಂಸ್ಥೆಯ ಕಾರ್ಯ. ಇಂದು
ಸ್ನೇಹಮಿಲನ ಸಂಘಟನೆ ಇಂತಹ ಸಮಾಜಮುಖಿ ಕಾರ್ಯಕ್ರಮ ಸಂಘಟಿಸಿರುವುದು ಆಭಿನಂದನೀಯ ಎಂದು ತಿಳಿಸಿದರು.
ರೋಟರಿ ಕ್ಲಬ್ ಬಂಟ್ವಾಳ ಕಾರ್ಯದರ್ಶಿ ರವಿರಾಜ ಶೆಟ್ಟಿ ವೇದಿಕೆಯಲ್ಲಿದ್ದರು.
ಸ್ನೇಹ ಮಿಲನದ ಅಧ್ಯಕ್ಷ ರವೀಂದ್ರ ಸಪಲ್ಯ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಸ್ಯ ಜಯಪ್ರಕಾಶ್ ರೈ ಮೇರಾವು ವಂದಿಸಿದರು, ಚಂದ್ರಹಾಸ ರೈ ಬಾಲಜಿಬೈಲು
ಕಾರ್ಯಕ್ರಮ ನಿರೂಪಿಸಿದರು.
Advertisement







