
ಬಂಟ್ವಾಳ: ಸರಕಾರಿ ಪದವಿಪೂರ್ವ ಕಾಲೇಜು ಸಜೀಪ ಮೂಡ ಇದರ ಪ್ರೌಢಶಾಲಾ ವಿಭಾಗದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಪೆರ್ವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾಗಿ ಪದೋನ್ನತಿಗೊಂಡು ಪುಂಜಾಲಕಟ್ಟೆ ಶಾಲೆಗೆ ವರ್ಗಾವಣೆಗೊಂಡ ಶಿಕ್ಷಕ ಗಣೇಶ್ ಅವರನ್ನು ಗೌರವಿಸಲಾಯಿತು.
ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ರವಿಚಂದ್ರ ಬಂಟ್ವಾಳ, ನಿಯೋಜಿತ ಅಧ್ಯಕ್ಷ ಧನಂಜಯ ಬಾಳಿಗ, ಹಿರಿಯ ವಿದ್ಯಾರ್ಥಿ ಸಂದೀಪ್ ಸಾಲ್ಯಾನ್,ನಿವೃತ್ತ ಶಿಕ್ಷಕ ಅಮನುಲ್ಲಾ ಖಾನ್ ಭಾಗವಹಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ಕ್ಷೇತ್ರದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ, ಬೀಡಿ ಗುತ್ತಿಗೆದಾರ ಸಂಜೀವ ಪೂಜಾರಿ ಸುಭಾಷ್ನಗರ, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾದ ಸೀತಾರಾಮ ಅಗೋಳಿಬೆಟ್ಟು, ದಿನಕರ್, ಸಂಜೀವ ಪೂಜಾರಿ, ನಳಿನಾಕ್ಷಿ, ವಸಂತಿ, ಮಲ್ಲಿಕಾ, ಅನ್ನಪೂರ್ಣೇಶ್ವರಿ, ದಾಮೋದರ ಮಡಿವಾಳ ಪಡ್ಪು ಅಶೋಕ್ ಪಾಣೆಲ ಉಪಸ್ಥಿತರಿದ್ದರು.
ಉಪಪ್ರಾಂಶುಪಾಲರಾಧ ಜ್ಯೋತಿ ಕುಮಾರಿ ಸ್ವಾಗತಿಸಿ ವಾರ್ಷಿಕ ವರದಿ ವಾಚಿಸಿದರು. ಶಿಕ್ಷಕರಾದ ಬಾಲಕೃಷ್ಣ ಶೆಟ್ಟಿ ಸನ್ಮಾನಿತರನ್ನು ಪರಿಚಯಿಸಿದರು, ಹೇಮಾವತಿ, ಮೋಕ್ಷಿತಾ, ಶುಭ ಬಹುಮಾನಿತರ ಪಟ್ಟಿ ವಾಚಿಸಿದರು.ವೆಂಕಟರಮಣ ಆಚಾರ್ ವಂದಿಸಿದರು. ಸುಲೋಚನಕುಮಾರಿ ಕಾರ್ಯಕ್ರಮ ನಿರೂಪಿಸಿದರು.ಶರ್ಮಿಳಾ ಶೆಣೈ , ಜೂಲಿಯೇಟ್ ಸಹಕರಿಸಿದರು.

ಬೆಳಿಗ್ಗೆ ನಡೆದ ಕಾರ್ಯಕ್ರಮವನ್ನು ತಾ. ಪಂ. ಮಾಜಿ ಅಧ್ಯಕ್ಷ ಯಶವಂತ ದೇರಾಜೆ ಉದ್ಘಾಟಿಸಿದರು. ಪ್ರಮುಖರಾದ ವಸಂತ ಶೆಟ್ಟಿ ಹಿರಿಯ ವಿದ್ಯಾರ್ಥಿಗಳಾದ ಶೈಲೇಶ್ ಪೂಜಾರಿ ಕೊಚ್ಚಿಗುಡ್ಡೆ ಸಂತೋಷ್ ಬೆಂಕ್ಯ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ವಿಶ್ವನಾಥ ಬೆಳ್ಚಾಡ ಪ್ರಮುಖರಾದ ಲಿಂಗಪ್ಪ ದೋಟ, ಅಬ್ದುಲ್ಲ ಕೊಳಕೆ, ಎಸ್ ಡಿ ಎಂ ಸಿ ಸದಸ್ಯರು ವೇದಿಕೆಯಲ್ಲಿದ್ದರು.
ಸಜಿಪಮೂಡ ಸರಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಸಂಕೇಶ, ಪ್ರಮುಖರಾದ ಸಂಜೀವ ಪೂಜಾರಿ ಕುಚ್ಚಿಗುಡ್ಡೆ, ವಿವೇಕ್ ಶೆಟ್ಟಿ ನಗ್ರಿಗುತ್ತು ಮೊದಲಾದ ಗಣ್ಯರು ಭಾಗವಹಿಸಿದ್ದರು. ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಚಿಗುರು ಚಿತ್ರಕಲಾ ಪ್ರದರ್ಶನ ನಡೆಯಿತು.
Advertisement







