ಬಂಟ್ವಾಳ: ರಾರಾಸಂ ಫೌಂಡೇಷನ್ ಬಂಟ್ವಾಳ ಇದರ ಆಶ್ರಯದಲ್ಲಿ ಲಯನ್ಸ್ ಕ್ಲಬ್ ಬಂಟ್ವಾಳ ಇದರ ಸಹಯೋಗದೊಂದಿಗೆ ರಾರಸಂಭ್ರಮ 14ನೇ ವರ್ಷದ ಸಾಂಸ್ಕೃತಿಕ ಕಲರವ ಡಿ.25ರಂದು ಬೆಳಿಗ್ಗೆ ಗಂಟೆ 9ರಿಂದ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಲಿದೆ.
ಮಾಜಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸುವರು, ದ.ಕ. ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಜೈನ್, ಸಂತ ಅಲೋಷಿಯಸ್ ಕಾಲೇಜಿನ ಪ್ರಾಧ್ಯಪಕಿ ಡಾ. ದಿವ್ಯ ವಿ.ಶೆಟ್ಟಿ, ಪತ್ರಕರ್ತ ಹರೀಶ್ ಮಾಂಬಾಡಿ, ಸುರಿಬೈಲು ಶಾಲೆಯ ಶಿಕ್ಷಕ ಗೋಪಾಲ ಎಸ್., ಜೆಸಿಐ ಬಂಟ್ವಾಳದ ಅಧ್ಯಕ್ಷ ಗಣೇಶ್ ಕೆ. ಕುಲಾಲ್ ಭಾಗವಹಿಸುವರು. ಸಂಜೆ 3 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು ಲಯನ್ಸ್ ಕ್ಲಬ್ ಮಂಗಳೂರಿನ ಅಧ್ಯಕ್ಷ ಜಯರಾಜ್ ಪ್ರಕಾಶ್, ಲಯನ್ಸ್ ಕ್ಲಬ್ ಪೂರ್ವ ಪ್ರಾಂತ್ಯಾಧ್ಯಕ್ಷ ರಮಾನಂದ ನೂಜಿಪ್ಪಾಡಿ, ಉದ್ಯಮಿ ಮಂಜುನಾಥ ಆಚಾರ್ಯ, ಜೆಸಿಐ ಮಡಂತ್ಯಾರಿನ ನಿಯೋಜಿತ ಅಧ್ಯಕ್ಷೆ ಅಮಿತಾ ಅಶೋಕ್, ಸದ್ಯಮಿ ಸದಾನಂದ ಬಂಗೇರ ಉಪಸ್ಥಿತರಿರುವರು.
ಇಂಡಿಯಾ ಮತ್ತು ಏಷ್ಯಾಬುಕ್ ಆಪ್ ರೆಕಾರ್ಡ್ನಲ್ಲಿ ದಾಖಲಾದ ಪ್ರತಿಭೆ ಅನ್ವೇಶ್ ಅಂಬೆಕಲ್ಲು ಅವರಿಗೆ ರಾರಾಸಂ ಪುರಸ್ಕಾರ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸದಾಶಿವ ಡಿ. ತುಂಬೆಯವರಿಗೆ ಗೌರವಾಭಿನಂದನೆ ನಡೆಯಲಿದೆ. ದಿನವಿಡಿ ವಿವಿಧ ಬಗೆಯ ಸ್ಪರ್ಧಾ ಕಾರ್ಯಕ್ರಮಗಳು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.