ಬಂಟ್ವಾಳ: ಕುರಿಯಾಳ ಗ್ರಾಮದ ದುರ್ಗಾನಗರ ಶ್ರೀ ಓಂಕಾರೇಶ್ವರೀ ದೇವಿ ಭಜನಾ ಮಂದಿರದ ವಾರ್ಷಿಕೋತ್ಸವ ಡಿ.26ರಂದು ಗುರುವಾರ ನಡೆಯಲಿದೆ.
ಆ ದಿನ ಬೆಳಿಗ್ಗೆ ಗಂಟೆ 5ಕ್ಕೆ ಸಾಮೂಹಿಕ ಪ್ರಾರ್ಥನೆ, ಗಣಹೋಮ, ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನೆ ನಡೆಯಲಿದೆ.
ಬೆಳಿಗ್ಗೆ 10 ಗಂಟೆಗೆ ಅರ್ಚಕ ಸುದರ್ಶನ್ ಬಲ್ಲಾಳ್ ನೇತೃತ್ವದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, 11ರಿಂದ ನಾಗದೇವರಿಗೆ ನಾಗತಂಬಿಲ, ಆಶ್ಲೇಷ ಬಲಿ, ಮಹಾಪೂಜೆ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ಶ್ರೀ ಓಂಕಾರೇಶ್ವರೀ ದೇವಿಗೆ ಮಹಾಪೂಜೆ ನಡೆದು ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6.30ಕ್ಕೆ ಭಜನಾ ಮಂಗಳ, ರಾತ್ರಿ 8.30ಕ್ಕೆ ಶ್ರೀ ಓಂಕಾರೇಶ್ವರೀ ದೇವಿಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 9.30ರಿಂದ ಸಸಿಹಿತ್ಲು ಮೇಳದಿಂದ ಮಹಾಶಕ್ತಿ ಮಂತ್ರದೇವತೆ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
Advertisement