
ಬಂಟ್ವಾಳ: ಪುದು ಗ್ರಾಮದ ಸುಜೀರು ಶ್ರೀ ವೀರ ಹನುಮಾನ್ ಮಂದಿರದ 23ನೇ ವಾರ್ಷಿಕೋತ್ಸವ ಜ.15ರಂದು ನಡೆಯಲಿದೆ.
ಬೆಳಿಗ್ಗೆ ಪೊಳಲಿ ಗಿರಿಪ್ರಕಾಶ್ ತಂತ್ರಿ ನೇತೃತ್ವದಲ್ಲಿ ಗಣಹೋಮ, ಪಂಚಾಮೃತ ಅಭಿಷೇಕ, ಸಾಮೂಹಿಕ ಸತ್ಯನಾರಾಯಣ ಪೂಜೆ ಮಹಾಪೂಜೆ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ಧಾರ್ಮಿಕ ಸಭೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಸಂಸದ ಬೃಜೇಶ್ ಚೌಟ, ವಿಹಿಂಪ ಮಂಗಳೂರು ವಿಭಾಗ ಕಾರ್ಯದರ್ಶಿ ದೇವಿ ಪ್ರಸಾದ್ ಶೆಟ್ಟಿ ಕೊಡ್ಮಾಣ್, ಬಿಜೆಪಿ ಮಾಜಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಗುತ್ತಿಗೆದಾರ ಮನೋಹರ್ ಡಿ ದೇವಾಡಿಗ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ವಕೀಲೆ ಸುಚಿತ್ರಾ ಅವಿನಾಶ್, ಪುದು ಗ್ರಾ.ಪಂ. ಸದಸ್ಯ ವಿಶು ಕುಮಾರ್ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 1 ಕ್ಕೆ ಪ್ರಸಾದ ವಿತರಣೆಯಾಗಿ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6 ರಿಂದ ಭಜನೆ ಪ್ರಾರಂಭಗೊಂಡು ರಾತ್ರಿ 8.30ಕ್ಕೆ ಮಂಗಳಾರತಿ , ಪ್ರಸಾದ ವಿತರಣೆ ಬಳಿಕ ಯಕ್ಷಗಾನ ಬಯಲಾಟ ನಡೆಯಲಿದೆ.
Advertisement







