
ಬಂಟ್ವಾಳ: ನಾವೂರು ಗ್ರಾಮದ ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನದಲ್ಲಿ ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಎರಡು ದಿನಗಳ ಕಾಲ ಕ್ಷೇತ್ರದ ತಂತ್ರಿಗಳಾದ ನಡ್ವಾಂತಾಡಿ ಶ್ರೀಪಾದ ಪಾಂಗಣ್ಣಯರ ನೇತೃತ್ವದಲ್ಲಿ ನಡೆಯಿತು.

ಶನಿವಾರ ಸಂಜೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹ ವಾಚನ, ದುರ್ಗಾ ನಮಸ್ಕಾರ ಪೂಜೆ, ಮಹಾ ಪೂಜೆ, ಉತ್ಸವ ಬಲಿ, ವಸಂತಕಟ್ಟೆ ಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಭಾನುವಾರ ಬೆಳಿಗ್ಗೆ ೧೨ ಕಾಯಿ ಗಣಪತಿ ಹೋಮ, ನವಕಲಶ ಪ್ರಧಾನ ಹೋಮ, ಕಲಶಾಭಿಶೇಕ, ಮಹಾಪೂಜೆ, ದರ್ಶನ ಬಲಿ ಉತ್ಸವ, ವಸಂತ ಕಟ್ಟೆಪೂಜೆ, ಬಟ್ಟಲು ಕಾಣಿಕೆ ಪ್ರಸಾದ, ಪಿಲಿಚಾಮುಂಡಿ ದೈವಕ್ಕೆ ಬಿಂಬ ಸಮರ್ಪಣೆ ಪಂಚಪರ್ವ, ಪ್ರಸನ್ನ ಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಜರುಗಿತು.

ಈ ಸಂದರ್ಭ ದೇವಸ್ಥಾನದ ಆಡಳಿತ ಸಮಿತಿ, ಉತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು.
