
ಬಂಟ್ವಾಳ: ಜೇಸಿಐ ಜೋಡುಮಾರ್ಗ ನೇತ್ರಾವತಿ ಘಟಕದ ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಸುಸ್ಥಿರ ಭವಿಷ್ಯಕ್ಕಾಗಿ ಯುವ ಜನತೆ ವಿಷಯದ ಬಗ್ಗೆ ಕೊಯಿಲ ಸರಕಾರಿ ಪ್ರೌಢಶಾಲೆಯಲ್ಲಿ ಭಾಷಣ ಸ್ಪರ್ಧೆಯನ್ನು ಆಯೋಜಿಸಿಸಲಾಯಿತು.

ರಾಷ್ಟ್ರೀಯ ಯುವ ದಿನಾಚರಣೆಯ ಪ್ರಯುಕ್ತ ಸ್ವಾಮಿ ವಿವೇಕಾನಂದರ ಆದರ್ಶ ಹಾಗೂ ಚಿಂತನೆಗಳನ್ನು ಪ್ರಸ್ತುತ ಯುವ ಜನತೆಗೆ ಪರಿಚಯಿಸುವ ಉದ್ದೇಶದಿಂದ ಜೆಸಿಐ ಜೋಡುಮಾರ್ಗ ನೇತ್ರಾವತಿ ಘಟಕದಿಂದ ಪ್ರಾಜೆಕ್ಟ್ ಡೈರೆಕ್ಟರ್ ರಮ್ಯಾ ಸೋಮಯಾಜಿ ಇವರ ನೇತೃತ್ವದಲ್ಲಿ ವಲಯ ತರಬೇತುದಾರರಾದ ಡಾ. ವಿನಾಯಕ್ ಕೆ. ಎಸ್. ತರಬೇತಿಯನ್ನು ನೀಡಿದರು.
ಶಾಲೆಯ ಮುಖ್ಯೋಪಾಧ್ಯಾಯಿನಿ ಸೌಜನ್ಯ, ಡಾ. ಕಾಶಿನಾಥ್ ಶಾಸ್ತ್ರಿ, ಸಹಶಿಕ್ಷಕಿ ಸೌಮ್ಯ ಉಪಸ್ಥಿತರಿದ್ದರು.
