
ಬಂಟ್ವಾಳ: ಕಳೆದ 52 ವರ್ಷಗಳಿಂದ ನಿರಂತರವಾಗಿ ಸೇವಾ ಕಾರ್ಯಗಳನ್ನು ಸಂಘಟಿಸುತ್ತಿರುವ ಲಯನ್ಸ್ ಕ್ಲಬ್ ಬಂಟ್ವಾಳ ಇದರ ನೇತೃತ್ವದಲ್ಲಿ ಕಲೆ, ಸಾಹಿತ್ಯ, ಸಾಂಸ್ಕೃತಿಕ ಶೈಕ್ಷಣಿಕ ಪ್ರೋತ್ಸಾಹದ ಕಾರ್ಯಕ್ರಮಗಳನ್ನು ಕಳೆದ 15 ವರ್ಷಗಳಿಂದ ಸಂಘಟಿಸುತ್ತಿರುವ ರಾರಾಸಂ ಫೌಂಡೇಷನ್ ಬಂಟ್ವಾಳ ಹಾಗೂ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಬಂಟ್ವಾಳ ತಾಲೂಕಿನ ವಿವಿಧ ವೃತ್ತಿಪರ ಸಂಘಟನೆ ಹಾಗೂ ಸಂಸ್ಥೆಗಳ ಆಹ್ವಾನಿತ ತಂಡಗಳ ಕ್ರಿಕೆಟ್ ಪಂದ್ಯಟ ರಿಪಬ್ಲಿಕ್ ಟ್ರೋಫಿ 2025 ಫೆ.2 ಆದಿತ್ಯವಾರ ಬಂಟ್ವಾಳದ ಭಂಡಾರಿಬೆಟ್ಟುವಿನಲ್ಲಿರುವ ಎಸ್ವಿಎಸ್ ಮೈದಾನದಲ್ಲಿ ನಡೆಯಲಿದೆ.
ಬೆಳಿಗ್ಗೆ 9 ಗಂಟೆಗೆ ಶಾಸಕ ರಾಜೇಶ್ ನಾಯ್ಕ್ ಪಂದ್ಯಾಟ ಉದ್ಘಾಟಿಸುವರು, ಲಯನ್ಸ್ ಕ್ಲಬ್ ಬಂಟ್ವಾಳದ ಅಧ್ಯಕ್ಷ ರಾಧಕೃಷ್ಣ ಬಂಟ್ವಾಳ ಅಧ್ಯಕ್ಷತೆ ವಹಿಸುವರು, ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಅರ್ಚನಾ ಡಿ. ಭಟ್, ಡಿವೈಎಸ್ಪಿ ವಿಜಯಪ್ರಸಾದ್, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಸಚಿನ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ. ಲಯನ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಡಾ. ಬಿ. ವಸಂತ ಬಾಳಿಗಾ, ಪುರಸಭೆ ಅಧ್ಯಕ್ಷ ವಾಸು ಪೂಜಾರಿ, ಬೇಬಿ ಕುಂದರ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು ಮಾಜಿ ಸಚಿವ ಬಿ.ರಮಾನಾಥ ರೈ, ಬಂಟ್ವಾಳ ತಾಲೂಕು ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ, ಲಯನ್ಸ್ ಜಿಲ್ಲಾ ಪೂರ್ವ ಗವರ್ನರ್ ವಸಂತ ಕುಮಾರ್ ಶೆಟ್ಟಿ, ಮೂರ್ತೆದಾರರ ಮಹಾಮಂಡಲದ ಅಧ್ಯಕ್ಷ ಸಂಜೀವ ಪೂಜಾರಿ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.
ಕ್ರಿಕೆಟ್ ಪಂದ್ಯಾಟದಲ್ಲಿ ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಮೆಸ್ಕಾಂ, ಡಾಕ್ಟರ್ಸ್ ಬಳಗ, ವಕೀಲರ ಸಂಘ, ಶಿಕ್ಷಕ ಬಳಗ, ಪಿಡಬ್ಲ್ಯುಡಿ ಗುತ್ತಿಗೆದಾರರ ಸಂಘ, ಗ್ಯಾರೇಜು ಮಾಲಕರ ಸಂಘ, ಕಾರ್ಯನಿರತ ಪತ್ರಕರ್ತರ ಸಂಘ, ಶಾಮಿಯಾನ ಮಾಲಕರ ಸಂಘ ಭಾಗವಹಿಸಲಿದೆ, ವಿಸೇಷ ಆಕರ್ಷಣೆಯಾಗಿ ತಾಲೂಕಿನ ಜನಪ್ರತಿನಿಧಿಗಳು ಹಾಗೂ ಇಲಾಖಾಧಿಕಾರಿಗಳ ಮಧ್ಯೆ ಪ್ರದರ್ಶನ ಪಂದ್ಯ ನಡೆಯಲಿದೆ. ಸದಾ ಕೆಸಲದ ಒತ್ತಡ, ಜಂಜಾಟದಲ್ಲಿರುವ ವೃತ್ತಿಪರರಿಗೆ ರಿಲ್ಯಾಕ್ಸ್ ಮೂಡಿನಲ್ಲಿ ಸಂಭ್ರಮಿಸಲು ಇದೊಂದು ಸುವರ್ಣ ಅವಕಾಶವಾಗಿದ್ದು ಈ ಪಂದ್ಯಾಟ ಬಂಟ್ವಾಳ ಪರಿಸರದಲ್ಲಿ ಹೊಸ ಭ್ರಾತೃತ್ವ ಹಾಗೂ ಮನಸ್ಸು ಮನಸ್ಸುಗಳ ಮಧ್ಯೆ ಬಾಂಧವ್ಯ ಬೆಸೆಯಲಿದೆ ಎಂದು ಲಯನ್ಸ್ ಕ್ಲಬ್ ಬಂಟ್ವಾಳದ ಅಧ್ಯಕ್ಷ ರಾಧಕೃಷ್ಣ ಬಂಟ್ವಾಳ್ ಹಾಗೂ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
—
