
ಬಂಟ್ವಾಳ: ಜೆಸಿಐ ಜೋಡುಮಾರ್ಗ ನೇತ್ರಾವತಿ ಹಾಗೂ ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಜಂಟಿ ಆಶ್ರಯದಲ್ಲಿ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ ಮಂಗಳವಾರ ಬಿ.ಸಿ.ರೋಡಿನ ಪ್ರೀತಿ ಕಾಂಪ್ಲೆಕ್ಸ್ನಲ್ಲಿ ನಡೆಯಿತು.
ಜೆಸಿಐ ಜೋಡುಮಾರ್ಗ ನೇತ್ರಾವತಿ ಅಧ್ಯಕ್ಷೆ ತೃಪ್ತಿ ಪಿ., ಅಧ್ಯಕ್ಷತೆ ವಹಿಸಿ ಕ್ಯಾನ್ಸರ್ ಬೆಗೆಗಿನ ಆರೋಗ್ಯ ಮಾಹಿತಿ ನೀಡಿದರು. ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಕಿಶೋರ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಜೆಸಿಐ ಕಾರ್ಯದರ್ಶಿ ಪ್ರಗತಿ ಕೆ. ವಂದಿಸಿದರು, ಕಾರ್ಯಕ್ರಮ ಸಂಯೋಜಕ ಹರಿಶ್ಚಂದ್ರ ಆಳ್ವ , ರೋಟರಿಯ ನಿಕಟಪೂರ್ವಾಧ್ಯಕ್ಷ ಸುರೇಶ್ ಸಾಲ್ಯಾನ್, ಜೊತೆ ಕಾರ್ಯದರ್ಶಿ ನಾಗೇಶ್ ಕುಲಾಲ್ ಉಪಸ್ಥಿತರಿದ್ದರು.
