
ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.
ಉಳಿದಂತೆ ಸಮಿತಿ ಸದಸ್ಯರಾಗಿ ಪ್ರಧಾನ ಅರ್ಚಕರಾದ ವೇ.ಮೂ.ಮಹೇಶ್ ಭಟ್, ದೇವಿಪ್ರಸಾದ್ ಪೂಂಜಾ ಬರಂಗರೆ,
ಸುಧೀರ್ ಕುಮಾರ್, ಕೆ.ಕಾನ್ಸಲೆ, ಕೆ.ಮೋಹನದಾಸ್ ಪೂಜಾರಿ, ನವೀನ್ ಕುಮಾರ್ ಪಣೋಲಿಬೈಲ್, ಅಣ್ಣುನಾಯ್ಕ್ ನಗ್ರಿ, ಸುಜಾತಗಣೇಶ್ ಶೆಟ್ಟಿ, ಬೇಬಿ ಯೋಗೀಶ್ ಪೂಜಾರಿ ಅವರು ನೇಮಕಗೊಂಡಿದ್ದಾರೆ.
ನೂತನ ವ್ಯವಸ್ಥಾಪನಾ ಸಮಿತಿ ಸೋಮವಾರ ದೇವಳದಲ್ಲಿ ಅಧಿಕಾರ ಸ್ವೀಕರಿಸಿದೆ. ಈ ಸಂದರ್ಭ ದೇವಳದ ಆಡಳಿತಾಧಿಕಾರಿಯಾಗಿದ್ದ ತಾರನಾಥ ಸಾಲಿಯಾನ್ ಪಿ., ಕಾರ್ಯನಿರ್ವಹಣಾಧಿಕಾರಿ ಪ್ರವೀಣ್, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಎ.ಸಿ.ಭಂಡಾರಿ, ಸಜೀಪಮುನ್ನೂರು ಮೂರ್ತೆದಾರರ ಸೇ.ಸ.ಸಂಘದ ಅಧ್ಯಕ್ಷ ಸಂಜೀವಪೂಜಾರಿ ಬೊಳ್ಳಾಯಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.
