
ಬಂಟ್ವಾಳ: ಜೆಸಿಐ ಬಂಟ್ವಾಳದ ವತಿಯಿಂದ ಸೆಲ್ಯೂಟ್ ಟೂ ಸೈಲೆಂಟ್ ವರ್ಕರ್ ಪ್ರಶಸ್ತಿಯನ್ನು ಸೆಕ್ಯುರಿಟಿ ಗಾರ್ಡ್ ವಾಸುದೇವಾ ಅಲೆತ್ತೂರು ಅವರಿಗೆ ಪ್ರದಾನ ಮಾಡಲಾಯಿತು.
ಇತ್ತಿಚೆಗೆ ನಡೆದ ಘಟಕದ ಮಾಸಿಕ ಸಭೆಯಲ್ಲಿ ಅಧ್ಯಕ್ಷ ಗಣೇಶ್ ಕೆ. ಕುಲಾಲ್ ಪ್ರಶಸ್ತಿ ನೀಡಿ ಗೌರವಿಸಿದರು. ಇದರ ಪೂರ್ವಭಾವಿಯಾಗಿ ಸದಸ್ಯರಿಗೆ ಘಟಕ ಅಭಿವೃದ್ಧಿ ಮತ್ತು ನಿರ್ವಹಣೆ ತರಬೇತಿಯನ್ನು ವಲಯ ಉಪಾಧ್ಯಕ್ಷ ರಂಜಿತ್ ಎಚ್. ಡಿ. ನೀಡಿದರು.

ನಿಕಟಪೂರ್ವಾಧ್ಯಕ್ಷೆ ರಶ್ಮಿ ಶೆಟ್ಟಿ, ಕಾರ್ಯದರ್ಶಿ ಕಿಶೋರ್ ಕುಮಾರ್ ಆಚಾರ್ಯ, ಕೋಶಾಧಿಕಾರಿ ಜೀವಿತಾ, ಲೇಡಿ ಜೇಸಿ ಅಧ್ಯಕ್ಷೆ ಬಬಿತಾ ಗಣೇಶ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.
