
ಬಂಟ್ವಾಳ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಜೆಸಿಐ ಬಂಟ್ವಾಳದ ಲೇಡಿ ಜೇಸಿ ವಿಭಾಗ ಹಾಗೂ ಕಾರ್ಮೆಲ್ ಕಾಲೇಜು ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮಹಿಳಾ ಸಾಧಕಿ ಕುಂಞಪಾತು ಕಾಮಜಲು ಅವರನ್ನು ಸನ್ಮಾನಿಸಲಾಯಿತು.


ಶನಿವಾರ ಮೊಡಂಕಾಪುವಿನ ಕಾರ್ಮೆಲ್ ಪದವಿ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲೆ ವಂ.ಡಾ. ಲತಾ ಫೆರ್ನಾಡೀಸ್ ಉದ್ಘಾಟಿಸಿದರು. ಲೇಡಿ ಜೇಸಿ ವಿಭಾಗದ ಅಧ್ಯಕ್ಷೆ ಬಬಿತಾ ಗಣೇಶ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗದ ಆಪ್ತ ಸಮಾಲೋಚಕಿ ದಿವ್ಯಾ ಎನ್., ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದ ಆಪ್ತ ಸಮಾಲೋಚಕಿ ಅಕ್ಷತಾ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಆರೋಗ್ಯ ಸಲಹೆ ನೀಡಿದರು. ಜೆಸಿಐ ಬಂಟ್ವಾಳದ ಅಧ್ಯಕ್ಷ ಗಣೇಶ್ ಕೆ. ಕುಲಾಲ್, ಕೋಶಾಧಿಕಾರಿ ಜೀವಿತಾ ಯತೀಶ್, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಶ್ವಿನಿ ಬಾಲಕೃಷ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಲೇಡಿ ಜೇಸಿ ವಿಭಾಗದ ಅಧ್ಯಕ್ಷೆ ಬಬಿತಾ ಗಣೇಶ್ ಸ್ವಾಗತಿಸಿದರು. ಸದಸ್ಯೆ ಸ್ವಾತಿಶ್ರೀ ವಂದಿಸಿದರು. ಕಾಲೇಜಿನ ವಿದ್ಯಾರ್ಥಿನಿ ಪ್ರೇಕ್ಷಾ ಕಾರ್ಯಕ್ರಮ ನಿರೂಪಿಸಿದರು. ನಿಕಟಪೂರ್ವಾಧ್ಯಕ್ಷೆ ರಶ್ಮಿ ಶೆಟ್ಟಿ, ಸದಸ್ಯೆ ರೂಪಾ ಎಸ್. ಬಂಗೇರ ಸಹಕರಿಸಿದರು.
Advertisement







