
ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಜ| ಕೆ.ಎಸ್. ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ ಇವರ ಸಹಯೋಗದೊಂದಿಗೆ 130ನೇ ರಕ್ತದಾನ ಶಿಬಿರ ಮಾ.16ರಂದು ಭಾನುವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ನಡೆಯಲಿದೆ.
ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ಎಸ್. ವಿಜಯ ಪ್ರಸಾದ್ ಶಿಬಿರ ಉದ್ಘಾಟಿಸುವರು, ರೋಟರಿ ಕ್ಲಬ್ ಮಾಜಿ ಜಿಲ್ಲಾ ಗವರ್ನರ್ ಎನ್. ಪ್ರಕಾಶ್ ಕಾರಂತ್ ಉಪಸ್ಥಿತರಿರುವರು ಎಂದು ಸೇವಾಂಜಲಿ ಪ್ರತಿಷ್ಠಾನ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
