

ಬಂಟ್ವಾಳ: ಇಲ್ಲಿನ ತಾಲೂಕು ಹಿರಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುರಕ್ಷಾಧಿಕಾರಿಯಾಗಿ 39 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತಿ ಹೊಂದಿದ ಮಮತ ಕೆ. ಇವರ ಬೀಳ್ಕೊಡುಗೆ ಸಮಾರಂಭ ನಡೆಯಿತು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್. ಆರ್ ತಿಮ್ಮಯ್ಯ, ತಾಲೂಕು ಆರೋಗ್ಯಾಧಿಕಾರಿ ಡಾ|| ಅಶೋಕ್ ಕುಮಾರ್ ರೈ, ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳಾದ ಡಾ. ರಾಜೇಶ್, ಡಾ. ದೀಪಾ ಪ್ರಭು ಮತ್ತಿತರರು ಮಮತಾ ಅವರನ್ನು ಗೌರವಿಸಿದರು. ಇಲಾಖಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

