
ಬಂಟ್ವಾಳ: ಮಾರ್ನಬೈಲು ಶ್ರೀ ಅಯ್ಯಪ್ಪ ಮಂದಿರದ ಅಭಿವೃದ್ದಿ ಮತ್ತು ಭೂಮಿ ಖರೀದಿ ಸಂಕಲ್ಪ ಸಿದ್ಧಿಗಾಗಿ ೧೮ ಗುರುವಾರ ಪರ್ಯಂತ ನಡೆಯಲಿರುವ ವಿಶೇಷ ಪಂಚಾರತಿ ಸೇವೆಯ ಎರಡನೇ ಗುರುವಾರದ ಪಂಚಾರತಿ ಸೇವೆ ನಡೆಯಿತು. ಉದ್ಯಮಿಗಳಾದ ರೋಹಿತ್ ಡಿ. ಶೆಟ್ಟಿ ನಗ್ರಿಗುತ್ತು, ಜಯರಾಮ ಹೆಗ್ಡೆ ಕುಡ್ವಪಾಲು, ಶ್ರೀ ಕ್ಷೇತ್ರ ನಂದಾವರದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ರಾಧಕೃಷ್ಣ ಆಳ್ವ ಕಂಚಿಲ, ಬಂಟ್ವಾಳತಾಲೂಕು ಪಿಡಬ್ಲ್ಯುಡಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ, ಉದ್ಯಮಿ ಗೋಪಾಲ ಮೂಲ್ಯ ನೆಲ್ಲಿ ಭಾಗವಹಿಸಿ ಶ್ರೀ ದೇವರಿಗೆ ಪಂಚಾರತಿ ಬೆಳಗಿದರು.



ಈ ಸಂದರ್ಭ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಆಡಳಿತ ಟ್ರಸ್ಟಿನ ಗೌರವಾಧ್ಯಕ್ಷರಾದ ಸಂಜೀವ ಗುರುಸ್ವಾಮಿ, ಕೃಷ್ಣ ಗುರುಸ್ವಾಮಿ, ಅಧ್ಯಕ್ಷ ಪುರುಷೋತ್ತಮ ಪೂಜಾರಿ, ಕಾರ್ಯದರ್ಶಿ ಯಶವಂತ ಕೆ. ಪುತ್ತೂರು, ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿ ಅಶೋಕ್ ಗಟ್ಟಿ ನಂದಾವರ, ಕೋಶಾಧಿಕಾರಿ ರಂಜಿತ್ ರಾವ್ ಬಟ್ಟಡ್ಕ, ಭಜನಾ ಸಮಿತಿ ಅಧ್ಯಕ್ಷ ಸುರೇಶ್ ಕುಲಾಲ್ ಕಲ್ಲಾಡಿಗೋಳಿ ಪದಾಧಿಕಾರಿ ಪ್ರಮುಖರಾದ ಯಾದವ ಬಂಗೇರ ಕಂಚಿಲ, ಪ್ರವೀಣ್ ಗಟ್ಟಿ ಮಾರ್ನಬೈಲು, ಸಂದೀಪ್ ಕುಮಾರ್ ನಾಗನವಳಚ್ಚಿಲು, ಯೋಗೀಶ್ ಗಟ್ಟಿ ನಂದಾವರ, ರಾಜೀವ ಕೊಟ್ಟಾರಿ ಕಲ್ಲಡ್ಕ, ವಿಶ್ವನಾಥ ಆಚಾರ್ಯ ಮಾರ್ನಬೈಲು, ನಿತಿನ್ ಕುಮಾರ್ ಮಾರ್ನಬೈಲು, ದೀಪ್ತೇಶ್ ಮೆಲ್ಕಾರ್ ಮತ್ತಿತರರು ಉಪಸ್ಥಿತರಿದ್ದರು.
ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ಅಭಿವೃದ್ಧಿ ಸಮಿತಿ ಅಧ್ಯಕ್ಷ ದಾಮೋದರ ಬಿ.ಎಂ. ಸ್ವಾಗತಿಸಿ, ನಿರೂಪಿಸಿದರು.


