
ಬಂಟ್ವಾಳ: ಪಾಣೆಮಂಗಳೂರಿನ ಹಳೇಯ ಉಕ್ಕಿನ ಸೇತುವೆಯ ಅಡಿಭಾಗದಲ್ಲಿ ನೇತ್ರಾವತಿ ನದಿಯಲ್ಲಿ ಮೃತದೇಹವೊಂದು ಪತ್ತೆಯಾಗಿದೆ. ಪ್ಯಾಂಟ್, ಟೀ ಶರ್ಟ್ ಧರಿಸಿದ ಗಂಡಸಿನ ಶವ ಇದಾಗಿದ್ದು ನೀರಿನಲ್ಲಿ ತೇಲಾಡುತ್ತಿರುವುದನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಶವ ಮೇಲೆತ್ತುವ ಕಾರ್ಯ ಆರಂಭಿಸಿದ್ದಾರೆ. ಸ್ಥಳದಲ್ಲಿ ಕುತೂಹಲಿಗರ ದಂಡು ಜಮಾಯಿಸುತ್ತಿದೆ

