
ಬಂಟ್ವಾಳ: ಇಲ್ಲಿನ ಲೋಕೋಪಯೋಗಿ ಇಲಾಖೆ ಉಪವಿಭಾಗದಲ್ಲಿ ಸಹಾಯಕ ಎಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸಿ ಇದೀಗ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ಪದೋನ್ನತಿಗೊಂಡಿರುವ ಪ್ರೀತಂ ಅವರಿಗೆ ಬೀಳ್ಕೊಡುಗೆ ಸಮಾರಂಭ ಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಲೋಕೋಪಯೋಗಿ ಇಲಾಖೆಯ ಬಂಟ್ವಾಳ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಜೈಪ್ರಕಾಶ್ ಸಿ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪುತ್ತೂರು ಪಿಡಬ್ಲ್ಯುಡಿ ಎಇಇ ರಾಜೇಶ್ ರೈ, ಸುಳ್ಯ ಎಇಇ ಗೋಪಾಲ್ ಹಾಗೂ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ ಎಇಇ ತಾರಾನಾಥ ಸಾಲ್ಯಾನ್ ಉಪಸ್ಥಿತರಿದ್ದರು. ಇಂಜಿನಿಯರ್ ಅರುಣ್ ಪ್ರಕಾಶ್ ಡಿಸೋಜಾ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು ಇಂಜಿನಿಯರ್ ದಿಲೀಪ್ ವಂದಿಸಿದರು. ಈ ಸಂದರ್ಭ ಕಚೇರಿ ಸಿಬ್ಬಂದಿಗಳು ಹಾಗೂ ಗುತ್ತಿಗೆದಾರರು ಹಾಜರಿದ್ದರು.
