

ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ರಕ್ತೇಶ್ವರೀ ದೇವಿ ಸನ್ನಿಧಿಯಲ್ಲಿ ಶ್ರೀ ರಕ್ತೇಶ್ವರೀ ದೇವಿ ಮತ್ತು ಪರಿವಾರ ದೇವರುಗಳಿಗೆ ಸೋಮವಾರ ದೃಢ ಕಲಶಾಭಿಷೇಕ ಬ್ರಹ್ಮಶ್ರೀ ನೀಲೇಶ್ವರ ಉಚ್ಚಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.

ಬೆಳಿಗ್ಗೆ ಗಣಹೋಮ ನಡೆದು ಬಳಿಕ ವಿವಿಧ ಅಭಿಷೇಕ, ದೃಢಕಲಶ ಪೂಜೆ, ಪಂಚಗವ್ಯ, ಪಂಚಾಮೃತ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭ ಮಾಜಿ ಸಚಿವ ಬಿ. ರಮಾನಾಥ ರೈ, ಪುರಸಭಾ ಅಧ್ಯಕ್ಷ ವಾಸು ಪೂಜಾರಿ, ಬೂಡ ಅಧ್ಯಕ್ಷ ಬೇಬಿ ಕುಂದರ್, ಸೇವಾ ಸಮಿತಿಯ ಅಧ್ಯಕ್ಷ ವಿಶ್ವನಾಥ ಬಿ. ಉಪಾಧ್ಯಕ್ಷ ಸಂಜೀವ ಪೂಜಾರಿ, ಕಾರ್ಯದರ್ಶಿ ಎನ್. ಶಿವಶಂಕರ್ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಐತಪ್ಪ ಪೂಜಾರಿ, ಕೋಶಾಧಿಕಾರಿ ನಾರಾಯಣ ಹೆಗ್ಡೆ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು, ಸಮಿತಿ ಸದಸ್ಯರಾದ ಬಿ. ಮೋಹನ್, ರಾಜೇಶ್ ಎಲ್. ನಾಯಕ್, ಗೋಪಾಲ ಸುವರ್ಣ, ಸತೀಶ್ ಕುಮಾರ್, ಪುಷ್ಪರಾಜ ಶೆಟ್ಟಿ, ಅರ್ಚಕ ರಘುಪತಿ ಭಟ್ ಮತ್ತಿತರರು ಉಪಸ್ಥಿತರಿದ್ದರು.
Advertisement







