
ಬಂಟ್ವಾಳ: ಪ್ರೇಮಿಯೊಬ್ಬ ಪ್ರೀಯತಮೆಯ ಹಲ್ಲೆ ಮಾಡಿ ಆ ಬಳಿಕ ನೇಣಿಗೆ ಶರಣಾದ ಘಟನೆ ಬಂಟ್ವಾಳ ತಾಲೂಕಿನ ಸುಜೀರು ದೈಯಡ್ಕ ಎಂಬಲ್ಲಿ ಇಂದು ಮಧ್ಯಾಹ್ನದ ವೇಳೆ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಡ್ಮಾನ್ ಕಾಂಜೀರ ಕೋಡಿ ಸುಧೀರ್ ಎಂದು ಗುರುತಿಸಲಾಗಿದೆ. ಯುವತಿ ದಿವ್ಯ ಎಂಬಾಕೆ ಗಂಭೀರ ಸ್ಥಿತಿಯಲ್ಲಿ ತುಂಬೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಇವರಿಬ್ಬರು ಕಳೆದ ೮ ವರ್ಷಗಳಿಂದ ಪ್ರೀತಿಸುತ್ತಾ ಇದ್ದರು ಎನ್ನಲಾಗಿದ್ದು ಯಾವುದೋ ಕ್ಷುಲ್ಲಕ ಕಾರಣಕ್ಕೆ ಇವರಿಬ್ಬರ ಮಧ್ಯೆ ಜಗಳ ನಡೆದಿದೆ. ಈ ಜಗಳ ವಿಕೋಪಕ್ಕೆ ತಿರುಗಿ ಸುಧೀರ್ ದಿವ್ಯ ಮೇಲೆ ಮನಬಂದಂತೆ ಥಳಿಸಿದ್ದು ಯುವತಿ ಸಾವನ್ನಪ್ಪಿದ್ದಾಳೆ ಎಂದು ಭಾವಿಸಿ ಆಕೆ ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.ಗಾಯಾಳು ದಿವ್ಯ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು ಅನ್ನುವ ಮಾಹಿತಿ ಇದೆ. ಇತ್ತ ಯುವಕ ಸುಧೀರ್ ಈ ಹಿಂದೆ ಕೂಡ ಟವರ್ ಹತ್ತಿ ಈಕೆಯನ್ನು ಹೆದರಿಸಿದ್ದ ಅನ್ನುವ ಮಾಹಿತಿ ಇದೆ. ಬಂಟ್ವಾಳ ಗ್ರಾಮಾಂತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Advertisement







