

ಬಂಟ್ವಾಳ: ಕರ್ನಾಟಕ ರಾಜ್ಯ ಟೈಲರ್ ಎಸೋಸಿಯೇಷನ್ ಬಂಟ್ವಾಳ ಕ್ಷೇತ್ರ ಸಮಿತಿ ಇದರ ಮಹಾಸಭೆ ಹಾಗೂ ಟೈಲರ್ ವೃತ್ತಿ ಬಾಂಧವರಿಗೆ ಸನ್ಮಾನ ಮತ್ತು ಟೈಲರ್ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಆ. 3ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ಬಿ.ಸಿ. ರೋಡಿನ ಅಂಬೇಡ್ಕರ್ ಸಭಾಭವನದಲ್ಲಿ ನಡೆಯಲಿದೆ.
ಕೆಎಸ್ಟಿಎ ಬಂಟ್ವಾಳ ಕ್ಷೇತ್ರ ಸಮಿತಿಯ ಅಧ್ಯಕ್ಷ ನಾಗೇಶ್ ಎಂ. ಅಧ್ಯಕ್ಷತೆ ವಹಿಸುವರು. ಕೆಎಸ್ಟಿಎ ರಾಜ್ಯಾಧ್ಯಕ್ಷ ನಾರಾಯಣ ಬಿ.ಎ., ಪ್ರಧಾನ ಕಾರ್ಯದರ್ಶಿ ಎ. ಪ್ರಜ್ವಲ್ ಕುಮಾರ್, ಉಪಾಧ್ಯಕ್ಷ ಸುರೇಶ್ ಸಾಲ್ಯಾನ್, ಜಿಲ್ಲಾಧ್ಯಕ್ಷೆ ವಿದ್ಯಾ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಮೋಹನ್ ಎಸ್. ಕೋಡಿ, ಕೋಶಾಧಿಕಾರಿ ಚಕ್ರೇಶ್ ಅಮೀನ್, ಉಪಾಧ್ಯಕ್ಷ ದೇಜಪ್ಪ ವಿ. ಪೂಜಾರಿ, ನಿಕಟಪೂರ್ವ ಕೋಶಾಧಿಕಾರಿ ಈಶ್ವರ್ ಕುಲಾಲ್, ಬಂಟ್ವಾಳ ಕ್ಷೇತ್ರ ಸಮಿತಿ ಕಾರ್ಯದರ್ಶಿ ಯಾದೇಶ್ ತುಂಬೆ, ಕೋಶಾಧಿಕಾರಿ ತುಳಸಿ ಆರ್ ಭಾಗವಹಿಸಲಿದ್ದಾರೆ.

Advertisement







