
ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ “ನವಫಲ” ಹಣ್ಣಿನ ತೋಟ ನಿರ್ಮಾಣ ಮಾಡಲಾಯಿತು.
ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ವಚನ್ ಶೆಟ್ಟಿ ಹಾಗೂ ಝೋನಲ್ ಲೆಪ್ಟಿನೆಂಟ್ ಸುರೇಶ್ ಸಾಲ್ಯಾನ್ ಹಣ್ಣಿನ ಗಿಡ ನೆಡುವ ಮೂಲಕ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಉದ್ದೇಶ ಹಾಗೂ ಮಹತ್ವದ ಬಗ್ಗೆ ತಿಳಿಸಿಕೊಟ್ಟರು.

ಈ ಸಂದರ್ಭ ರೋಟರಿ ಕ್ಲಬ್ ಬಂಟ್ವಾಳ ಟೌನ್ ಕಾರ್ಯದರ್ಶಿ ನಾಗೇಶ್ ಎಂ. ಕೋಶಾಧಿಕಾರಿ ಸೀತಾರಾಮಶೆಟ್ಟಿ ಕಾಂತಾಡಿ, ನಿಕಟಪೂರ್ವ ಕಾರ್ಯದರ್ಶಿ ನಾರಾಯಣ ಸಿ. ಪೆರ್ನೆ, ಸದಸ್ಯರಾದ ಉಮೇಶ್ ಶೆಟ್ಟಿ, ಭಾಸ್ಕರ್, ಶಾಲಾ ಹಿರಿಯ ವಿದ್ಯಾರ್ಥಿ ಚಿನ್ನ ಕಲ್ಲಡ್ಕ ಹಾಗೂ ಶಿಕ್ಷಕರು , ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಶಾಲೆಯ ಮುಖ್ಯ ಶಿಕ್ಷಕ್ಷಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ
ಸ್ವಾಗತಿಸಿದರು, ಸಹಶಿಕ್ಷಕಿ ಸಂಗೀತ ಶರ್ಮ ಕಾರ್ಯಕ್ರಮ ನಿರೂಪಿಸಿದರು.


Advertisement







